ಚಾಮರಾಜನಗರ:ಒಂದೇ ಮನೆಯ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಬೇಡರಪುರ ಗ್ರಾಮದಲ್ಲಿ ನಡೆದಿದೆ.
ಮಹದೇವಸ್ವಾಮಿ(48), ಸವಿತಾ, (40), ಸಿಂಚನಾ(13) ಆತ್ಮಹತ್ಯೆಗೆ ಶರಣಾದವರು.
ಮೂವರ ಮೃತದೇಹ ಇಂದು ಬೆಳಗ್ಗೆ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ. ಆಸ್ತಿ ವಿಚಾರಕ್ಕೆ ಗಲಾಟೆ ನಡೆಯುತ್ತಿದ್ದರಿಂದ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇಂದು ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದ್ದು, ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಪೊಲೀಸರು ಭೇಟಿ ಪರಿಶೀಲನೆ ಮಾಡಿ ತನಿಖೆ ಕೈಗೊಂಡಿದ್ದಾರೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಸ್ಥಳದಲ್ಲಿ ಡೆತ್ ನೋಟು ಕೂಡ ಸಿಕ್ಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.