ಮಂಗಳೂರು: ಪಶ್ಚಿಮ ವಲಯ ಡಿಐಜಿಪಿ ಆಗಿ ಐಪಿಎಸ್ ಅಧಿಕಾರಿ ಅಮಿತ್ ಸಿಂಗ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಅವರು ಅಮಿತ್ ಸಿಂಗ್ ಅವರನ್ನು ಬರಮಾಡಿಕೊಂಡರು. ಅಮಿತ್ ಸಿಂಗ್ ಅವರು ಮಂಗಳೂರು ಮತ್ತು ಪುತ್ತೂರಿನಲ್ಲಿ ಎಎಸ್ಪಿಯಾಗಿ, ಹಾಸನ ಮತ್ತು ಕಲಬುರ್ಗಿ ಜಿಲ್ಲೆಗಳಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ನಾಲ್ಕು ವರ್ಷ ಕಾರ್ಯನಿರ್ವಹಿಸಿದ್ದರು. ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮಾದಕ ಪದಾರ್ಥ ಮಾರಾಟ ದಂಧೆ, ಕೋಮು ದ್ವೇಷ ಹರಡುವಿಕೆ ನಿಗ್ರಹಕ್ಕೆ ಆದ್ಯತೆ ನೀಡುತ್ತೇನೆ. ಸೈಬರ್ ಅಪರಾಧ ಚಟುವಟಿಕೆ ನಿಯಂತ್ರಣಕ್ಕೂ ಹೆಚ್ಚಿನ ನಿಗಾ ವಹಿಸಲಾಗುವುದು’ ಎಂದರು. ಹಿಂದಿನ ಡಿಐಜಿ ಚಂದ್ರಗುಪ್ತ ಅವರು ಬೆಂಗಳೂರು ಅಪರಾಧ ವಿಭಾಗದ ಐಜಿಪಿಯಾಗಿ ಬಡ್ತಿ ಪಡೆದಿದ್ದಾರೆ.
Trending
- ರಾಷ್ಟ್ರೀಯ ಹೆದ್ದಾರಿ ಯು-ಟರ್ನ್ ಏಕಪಕ್ಷೀಯವಾಗಿ ಬಂದ್: ಪರ್ಯಾಯ ಸರ್ವಿಸ್ ರಸ್ತೆ ಇಲ್ಲದೆ ಜನಜೀವನ ಅಸ್ತವ್ಯಸ್ತ – ತಕ್ಷಣ ಹಳೆಯ ವ್ಯವಸ್ಥೆ ಪುನಸ್ಥಾಪನೆಗೆ ಯೋಗಿಶ್ ಶೆಟ್ಟಿ ಜಪ್ಪುರ ಆಗ್ರಹ
- Tulunada Rakshana Vedike, Udupi District, Felicitates Former Hockey India Player Adrian D’Souza
- 🛑 ಕಾಸರಗೋಡು | ತೂಮಿನಾಡು ಕುಟುಂಬ ಕಲಹ: ಮೃತರ ಸಂಖ್ಯೆ 2ಕ್ಕೆ ಏರಿಕೆ, ಗಂಭೀರ ಗಾಯಗೊಂಡಿದ್ದ ಶೇಕುಂಞಿ ಆಸ್ಪತ್ರೆಯಲ್ಲಿ ನಿಧನ
- ಕೆ.ಎಸ್. ಹೆಗ್ಡೆ ಆಸ್ಪತ್ರೆ ಸಮೀಪ ತ್ಯಾಜ್ಯ ನೀರು ನಿಂತು ತೀವ್ರ ಸಮಸ್ಯೆ –ಶಾಶ್ವತ ಪರಿಹಾರಕ್ಕೆ ತುಳುನಾಡ ರಕ್ಷಣಾ ವೇದಿಕೆ ಅಟೋ ಘಟಕದಿಂದ ಒತ್ತಾಯ
- ಅಭಿವೃದ್ಧಿಯಲ್ಲಿ ಹೊಸ ಭರವಸೆ ಮೂಡಿಸಿದ ಕೇಂದ್ರ ಬಜೆಟ್:- ಶಾಸಕ ಕಾಮತ್
- ಮಂಗಳೂರು | ಎಚ್ಚರಿಕೆ ಗಂಟೆ ಹೊಡೆಯುವ ಗುಜ್ಜರಕೆರೆ ನೀರು
- ವೀಸಾ ಮೋಸ ಹಾಗೂ ಸಂಘಟಿತ ಅಪರಾಧ ಪ್ರಕರಣ ಆರೋಪಿಯನ್ನು ತಕ್ಷಣ ಬಂಧಿಸುವಂತೆ ಪೊಲೀಸ್ ಆಯುಕ್ತರಿಗೆ ತುಳುನಾಡು ರಕ್ಷಣಾ ವೇದಿಕೆ ಆಗ್ರಹ
- ಕನ್ನಡ ಶಾಲೆ ಉಳಿಸಿ–ಬೆಳೆಸುವ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಹೋರಾಟ ಶ್ಲಾಘನೀಯ– ಕರ್ನಾಟಕ ರಕ್ಷಣಾ ವೇದಿಕೆ( ಪ್ರವೀಣ್ ಶೆಟ್ಟಿ ಬಣ) ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ
