ಉಡುಪಿ: ಬಿಜೆಪಿ ಮುಖಂಡ ಮತ್ತು ಕರಾವಳಿ ಬೈಪಾಸ್ ರೋಡ್ ನ ಶಾರದಾ ಇಂಟರ್ನ್ಯಾಶನಲ್ ಹೋಟೆಲ್ ಮಾಲೀಕ ಬಿ ಸುಧಾಕರ ಶೆಟ್ಟಿ ಅವರು ಜ.04 ರ ಗುರುವಾರ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಸುಧಾಕರ ಶೆಟ್ಟಿ 2013ರಲ್ಲಿ ಬಿಜೆಪಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ ಸೋತಿದ್ದರು. ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.ಪ್ರಗತಿಪರ ಕೃಷಿಕ ಹಾಗೂ ಹೋಟೆಲ್ ಉದ್ಯಮಿಯಾಗಿದ್ದ ಸುಧಾಕರ ಶೆಟ್ಟಿ , ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಮತ್ತು ಜಿಲ್ಲಾ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
Trending
- ಮಂಗಳೂರು ; ಡಿ.28 ರಂದು 8ನೇ ವರ್ಷದ ಮಂಗಳೂರು ಕಂಬಳ ಗೋಲ್ಡ್ ಫಿಂಚ್ ಸಿಟಿಯಲ್ಲಿ .!
- ಜಮ್ಮು ಕಾಶ್ಮೀರ | ಸೇನಾ ವಾಹನ ಕಮರಿಗೆ ಬಿದ್ದು ಐವರು ಯೋಧರು ಮೃತ್ಯು
- ಆರ್.ಪಿ.ಸಿ ಗ್ರಾಹಕರಿಗೆ ಅನ್ಯಾಯ ವಾದಲ್ಲಿ ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ ಸಭೆ – ಯೋಗೀಶ್ ಶೆಟ್ಟಿ ಜಪ್ಪು
- ವಾಮದಪದವು ಡಿಸೆಂಬರ್ 30, ಕಾಡು ಪ್ರಾಣಿಗಳ ಕಾಟ ತಡೆಗಟ್ಟುದ್ದಕ್ಕಾಗಿ ತುಳುನಾಡ ರಕ್ಷಣಾ ವೇದಿಕೆ ಸಹಭಾಗಿತ್ವದಲ್ಲಿ ಜನಜಾಗೃತಿ ಸಭೆ
- ಮಂಗಳೂರು : ದಾಖಲೆ ಮಾಡಿಸಲು 4 ಲಕ್ಷಕ್ಕೆ ಬೇಡಿಕೆ: ಲಂಚ ಸ್ವೀಕರಿಸುತ್ತಿದ್ದಾಗ ಮುಲ್ಕಿ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ
- ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ರವರ ಪದಗ್ರಹಣ ಸಮಾರಂಭ
- ಉಚ್ಚ ನ್ಯಾಯಲಯದ ಪೀಠ ಸ್ಥಾಪನೆ ಮುಖ್ಯ ಮಂತ್ರಿಗಳಿಗೆ ಮಂಗಳೂರು ವಕೀಲರ ಸಂಘ ಮನವಿ ಸಲ್ಲಿಕೆ
- ಮಂಗಳೂರು : ಲಂಚ ಸ್ವೀಕರಿಸಿದ ಪಿಡಿಒಗೆ 3 ವರ್ಷ ಜೈಲು ಶಿಕ್ಷೆ..!!