ಮಂಗಳೂರು: ಮನಪಾ ಬೋಳೂರು ವಾರ್ಡ್ ಕಾರ್ಪೊರೇಟರ್ ಜಗದೀಶ್ ಶೆಟ್ಟಿಯವರು ಇಂದು ಸಂಜೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಗರದ ಡಿಸಿ ಆಫೀಸ್ ಬಳಿಯ ತಾಜ್ ಮಂಜೂರಾನ್ ಹೊಟೇಲ್ ಬಳಿಯಲ್ಲಿ ಕಾರಿನಲ್ಲಿಯೇ ಕುಳಿತು ಅವರು ವಿಷ ಸೇವನೆ ಮಾಡಿದ್ದಾರೆ. ವೀಳ್ಯದೆಲೆಗೆ ಸ್ಪ್ರೇ ಮಾಡುವ ರಾಸಾಯನಿಕವನ್ನು ಎರಡು ಸ್ಪೂನ್ ನಷ್ಟು ಸೇವನೆ ಮಾಡಿದ್ದರು ಎಂದು ತಿಳಿದು ಬಂದಿದೆ.. ಜಗದೀಶ್ ಶೆಟ್ಟಿಯವರು ವಿಷ ಸೇವಿಸಿ ಅಸ್ವಸ್ಥರಾಗಿದ್ದನ್ನು ನೋಡಿ ತಕ್ಷಣ ಅಲ್ಲಿದ್ದವರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಗೆ ದಾಖಲಾದ ಸಂದರ್ಭ ಅವರು ಪರಿಸ್ಥಿತಿ ಗಂಭೀರವಾಗಿತ್ತು. ಆದರೆ ಸದ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ವೈದ್ಯರು ತಿಳಿಸಿದ್ದಾರೆ. ಆದರೆ ಸದ್ಯ ಅವರನ್ನು ಐಸಿಯುನಲ್ಲಿರಿಸಿ ಪರಿಶೀಲನೆ ಮಾಡಲಾಗುತ್ತಿದೆ.
Trending
- ಜಿಲ್ಲಾ ಬ್ಯಾಂಕ್ನಿಂದ ಉಪ್ಪೂರು ಸಹಕಾರಿ ಸಂಘಕ್ಕೆ ಪ್ರತಿಷ್ಠಿತ ಸಾಧನಾ ಪ್ರಶಸ್ತಿ
- ಮಲ್ಪೆ ಬಂದರಿನಲ್ಲಿ ಮೀನುಗಾರ ಕಾರ್ಮಿಕನ ಕೊಲೆಬೋಟಿನ ಕ್ಯಾಬಿನ್ನಲ್ಲೇ ಚೂರಿ ಇರಿತ; ಪರಾರಿಯಾಗುತ್ತಿದ್ದ ಆರೋಪಿ ರೈಲು ನಿಲ್ದಾಣದಲ್ಲಿ ಬಂಧನ
- ₹5 ಕೋಟಿಗೂ ಅಧಿಕ ಹಣ ಸಂಗ್ರಹದ ಲೆಕ್ಕಪತ್ರ ಎಲ್ಲಿದೆ? — ಮಂಗಳಾ ಸ್ವಿಮ್ಮಿಂಗ್ ಕ್ಲಬ್ ವಿರುದ್ಧ ಮಾಜಿ ಕಾರ್ಯದರ್ಶಿ ಆರ್. ಧನರಾಜ್ ಆರೋಪ
- ಮುದರಂಗಡಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮುಂಬೈ ನಟೋರಿಯಸ್ ಗ್ಯಾಂಗ್ಸ್ಟರ್ ಅನುಜ್ ಪಾಟೀಲ್ ಬಂಧನ
- ಆಟಿದ ಐಸಿರಿ’ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸದಸ್ಯರಿಗೆ ಗೌರವ ಅಭಿನಂದನೆ
- 30–50ರ ವಯೋಮಾನದವರಲ್ಲಿ ಸ್ಟ್ರೋಕ್ ಪ್ರಕರಣಗಳ ಏರಿಕೆ; ‘ಸುವರ್ಣಾವಧಿ’ಯಲ್ಲಿ ಚಿಕಿತ್ಸೆ ಪಡೆಯಲು ಕರೆ
- ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆ ಖಂಡನೀಯ: ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಉಡುಪಿ ಪತ್ರಕರ್ತರ ಸಂಘ ಆಗ್ರಹ
- ಆರೂರು ಅಡ್ಜಿಲು ಭಾಗದ ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಮೆಸ್ಕಾಂ ಒಂದು ತಿಂಗಳೊಳಗೆ ಹೊಸ ಟಿಸಿ ಅಳವಡಿಸುವ ಭರವಸೆ – ತುಳುನಾಡು ರಕ್ಷಣಾ ವೇದಿಕೆ ಆಗ್ರಹ
