ಚಿಕ್ಕಮಗಳೂರು: ಮೂರು ದಶಕಗಳ ಹಿಂದೆ ಬಾಬರಿ ಧ್ವಂಸ ಸಂದರ್ಭ ಹುಬ್ಬಳ್ಳಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಶ್ರೀಕಾಂತ್ ಪೂಜಾರಿ ಎಂಬಾತನನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ಮಾಜಿ ಸಚಿವ ಸಿ.ಟಿ.ರವಿ ‘ನಾನೂ ಕರಸೇವಕ, ನನ್ನನ್ನು ಬಂಧಿಸಿ’ ಎಂದು ಬರೆದಿರುವ ಭಿತ್ತಿಪತ್ರ ಹಿಡಿದು ಗುರುವಾರ ಚಿಕ್ಕಮಗಳೂರು ನಗರ ಠಾಣೆ ಎದುರು ಏಕಾಂಗಿ ಧರಣಿ ನಡೆಸಿದರು.
ಕೆಲವು ಕಾರ್ಯಕರ್ತರೊಂದಿಗೆ ಆಗಮಿ ಸಿದ ಅವರು ಪೊಲೀಸ್ ಠಾಣೆಯ ಮುಂಭಾಗ ‘ನಾನು ಕ್ರಿ.ಶ.1992 ಡಿ.6ರ ಅಯೋಧ್ಯೆ ಶ್ರೀರಾಮ ಮಂದಿರದ ಕರಸೇವಕ, ನನ್ನನ್ನೂ ಬಂಧಿಸಿ’ ಎಂಬ ಭಿತ್ತಿಪತ್ರವನ್ನು ಹಿಡಿದು ನಗರ ಪೊಲೀಸ್ ಠಾಣೆ ಮುಂಭಾಗ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ಠಾಣೆಯ ಗೇಟ್ ಆವರಣದಲ್ಲಿದ್ದ ಕಾರ್ಯಕರ್ತರು ಸಿ.ಟಿ.ರವಿ ಪ್ರತಿಭಟನೆಗೆ ಸಾಥ್ ನೀಡಿದರು.
ಈ ವೇಳೆ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ವೇಳೆ ಹೆಚ್ಚುವರಿ ಎಸ್ಪಿ ಕೃಷ್ಣ ಮೂರ್ತಿಯವರು ಸಿ.ಟಿ.ರವಿಯನ್ನು ಪೋಲಿಸ್ ಠಾಣೆ ಒಳಗೆ ಕರೆದುಕೊಂಡು ಹೋದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ನಾವೂ ಕರ ಸೇವಕರು, ನಮ್ಮನ್ನು ಬಂಧಿಸಿ ಎಂದು ಠಾಣೆಗೆ ಮುತ್ತಿಗೆ ಹಾಕಲು ಮುಂದಾದರು. ಈ ಸಂದರ್ಭ ಬಿಜೆಪಿ ಕಾರ್ಯಕ ರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ, ತಳ್ಳಾಟ, ನೂಕಾಟ ನಡೆಯಿತು. ನಂತರ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಠಾಣೆಯ ಆವರಣದಿಂದ ಹೊರಗೆ ಕಳಿಸಿದರು.
Trending
- ಮಂಗಳೂರು ಜೈಲಿಗೆ ಡಿಜಿಪಿ ಅಲೋಕ್ ಕುಮಾರ್ ಭೇಟಿ: ಎಐ ತಂತ್ರಜ್ಞಾನ ಪ್ರಯೋಗ, ಕಟ್ಟುನಿಟ್ಟಿನ ನಿಯಂತ್ರಣಕ್ಕೆ ಒತ್ತು
- ಮಂಗಳೂರು : ಕ್ರಿಸ್ ಮಸ್ ಹಬ್ಬ ಸಮಾಜದಲ್ಲಿ ಸತ್ಯ,ನ್ಯಾಯ ಹಾಗೂ ಸಹ ಜೀವನದ ಮೌಲ್ಯಗಳನ್ನು ಮರುಸ್ಥಾಪಿಸುವ ವಿಶಿಷ್ಟ ಅವಕಾಶ ಒದಗಿಸುತ್ತದೆ ; ಧರ್ಮಾಧ್ಯಕ್ಷ ಡಾ.ಪೀಟರ್ ಪಾವ್ಲ್ ಸಲ್ಡಾನ್ಹಾ.
- ಡಿಸೆಂಬರ್ 25ರಂದು ಮಂಗಳೂರಿನ ಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಎಂ.ಆರ್.ಜಿ. ಗ್ರೂಪ್ನ ಆಶಾ–ಪ್ರಕಾಶ್ ಶೆಟ್ಟಿ ಅವರ ಮಹತ್ವಾಕಾಂಕ್ಷಿ ಸಮಾಜಮುಖಿ ಯೋಜನೆ ‘ನೆರವು–2025’
- ಉಡುಪಿ: ಲಾಡ್ಜ್ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಪಿಂಪ್ಗಳನ್ನು ಬಂಧಿಸಿದ ಪಡುಬಿದ್ರೆ ಪೊಲೀಸರು
- ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು ಹಳೆ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
- ಸಹಕಾರಿ ಬ್ಯಾಂಕ್ಗಳ ಆಡಳಿತ ಮಂಡಳಿಯಲ್ಲಿ ಯಾವುದೇ ವ್ಯಕ್ತಿ ಗರಿಷ್ಠ 10 ವರ್ಷಗಳ ಕಾಲ ಮಾತ್ರ ನಿರ್ದೇಶಕ ಸ್ಥಾನ , ನಿರ್ದೇಶಕರ ಭವಿಷ್ಯ ಕುರಿತಾಗಿ ಚರ್ಚೆಗೂ ದಾರಿ ?
- ಮಂಗಳೂರು: MDMA ಸಾಗಾಟ ಜಾಲ ಭೇದಿಸಿದ ಸಿಸಿಬಿ; ಮೂವರು ಆರೋಪಿಗಳು ಬಂಧನ
- ಕರ್ತವ್ಯಕ್ಕೆ ಅಡ್ಡಿ ಎಂಬ ಸುಳ್ಳು ಪ್ರಕರಣ ದಾಖಲಿಸಿದ ಪೊಲೀಸ್ ಕ್ರಮ ಖಂಡನೀಯ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯಿಂದ ತೀವ್ರ ಆಕ್ರೋಶ
