ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರ ಮನೆಯಲ್ಲಿ ಕಳ್ಳತನವಾಗಿದ್ದು, ಈ ಬಗ್ಗೆ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗುರುಕಿರಣ್ ಅತ್ತೆ ಕಸ್ತೂರಿ ಶೆಟ್ಟಿ ದೂರು ನೀಡಿದ್ದಾರೆ. ಎಫ್‌ಐಆರ್ ದಾಖಲಾಗಿದೆ. 31-12-2023 ರ ಮಧ್ಯಾಹ್ನ ಬೀರುವಿನಲ್ಲಿ ಕಸ್ತೂರಿ ಶೆಟ್ಟಿ 2.05 ಲಕ್ಷ ಹಣ ಇಟ್ಟಿದ್ರಂತೆ. ಜನವರಿ 5ರಂದು ಬೀರು ಚೆಕ್ ಮಾಡಿದಾಗ ಹಣ ಇರಲಿಲ್ಲ. ಎರಡು ದಿನಗಳ ಕಾಲ ಮನೆಯಲ್ಲೆಲ್ಲ ಹುಡುಕಾಡಿದ್ರೂ ಹಣ ಸಿಕ್ಕಿಲ್ಲ. ಹೀಗಾಗಿ ಜನವರಿ 7ರಂದು ಚಂದ್ರಾ ಲೇಔಟ್ ಠಾಣೆಗೆ ಗುರುಕಿರಣ್ ಅತ್ತೆ ದೂರು ನೀದ್ದಾರೆ. ಕಳೆದ ಆರು ತಿಂಗಳಿಂದ ರತ್ನಮ್ಮ ಎಂಬುವರು ಮನೆ ಕೆಲಸಕ್ಕೆ ಬರ್ತಿದ್ದಾರೆ. ರೂಮ್‌ಗೆ ರತ್ನಮ್ಮ ಬಿಟ್ಟು ಬೇರೆ ಯಾರೂ ಕೂಡ ಬಂದಿಲ್ಲ. ಮನೆ ಕೆಲಸದಾಕೆ ರತ್ನಮ್ಮಳೇ ಹಣ ಕದ್ದಿರಬಹುದು ಅಂತಾ ಕಸ್ತೂರಿ ದೂರು ನೀಡಿದ್ದಾರೆ. ಸದ್ಯ ಚಂದ್ರಲೇಔಟ್ ಪೊಲೀಸ್ರು ಮನೆ ಕೆಲಸದಾಕೆ ರತ್ನಮ್ಮಳ ವಿಚಾರಣೆ ನಡೆಸುತ್ತಿದ್ದಾರೆ.
Trending
- ಭಾರತ ದಾಳಿಗೆ ಪಾಕಿಸ್ತಾನ ತತ್ತರ
- ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ
- ತೌಲೊ ಜಿಯನ್ಸೂವಿನಲ್ಲಿ ಕು.ಮನ್ವಿತ ಮನೋಜ್ ಕುಮಾರ್ ಗೆ ಚಿನ್ನದ ಪದಕ
- Kannada Sangha Bahrain has elected a new Executive Committee
- ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ಕರುನಾಡ ಕಾಯಕ ಯೋಗಿ ಸದ್ಭಾವನ ರಾಜ್ಯಪ್ರಶಸ್ತಿಗೆ ಆಯ್ಕೆ
- ಸಿಂಧೂರ ಆಪರೇಷನ್ ಮೂಲಕ ಪಾಕಿಸ್ತಾನಕ್ಕೆ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆ.
- ಉಲಾಯಿ ಪಿದಾಯಿ ಜುಗಾರಿ ಆಟ : ಐದು ಮಂದಿ ಉಲಾಯಿ…!!
- ಯಕ್ಷಗಾನ ಮತ್ತು ಸಾಮಾಜಿಕ ಧುರೀಣ ಪಣಿಯೂರು ಕರುಣಾಕರ ಶೆಟ್ಟರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ