ಉಡುಪಿ: ಶ್ರೀಕೃಷ್ಣ ಮಠದಲ್ಲಿ ನಡೆಯುವ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಉಡುಪಿ ನಗರ ವ್ಯಾಪ್ತಿಯಲ್ಲಿ ಜನವರಿ 17 ಮತ್ತು 18ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿ ರುವುದರಿಂದ ಸಾರ್ವಜನಿಕರಿಗೆ ಹಾಗೂ ಭಕ್ತಾದಿಗಳಿಗೆ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮ 1989 ರ ನಿಯಮ 221 5(ಎ)ರ ಅನ್ವಯ ಈ ಕೆಳಕಂಡ ರಸ್ತೆಗಳಿಗೆ ಬದಲಿ ಮಾರ್ಗ ಹಾಗೂ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ದಂಡಾಧಿಕಾರಿ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಜನವರಿ 17ರಂದು ಸಂಜೆ 4 ಗಂಟೆಯಿಂದ ಮಂಗಳೂರಿನಿಂದ ಉಡುಪಿ ಮತ್ತು ಮಣಿಪಾಲ ಕಡೆಗೆ ಹೋಗುವ ಎಲ್ಲಾ ಖಾಸಗಿ ಬಸ್ಸುಗಳು ಸ್ವಾಗತಗೋಪುರ ರಸ್ತೆಯಲ್ಲಿ ಸಂಚಾರ ಮಾಡದೇ ರಾ.ಹೆ-66 ಮೂಲಕ ಕರಾವಳಿ ಜಂಕ್ಷನ್ -ಬನ್ನಂಜೆ- ಶಿರಿಬೀಡು-ಸಿಟಿ ಬಸ್ಸು ನಿಲ್ದಾಣ-ಐರೋಡಿಕರ್-ಸರ್ವಿಸ್ ಬಸ್ಸು ನಿಲ್ದಾಣ ತಲುಪಬೇಕು. ಅದೇ ರೀತಿ ಮಂಗಳೂರಿಗೆ ತೆರಳುವ ಬಸ್ಸುಗಳು ಸರ್ವಿಸ್ ಬಸ್‌ನಿಲ್ದಾಣದಿಂದ ಕಿದಿಯೂರು ಹೊಟೇಲ್ ಮೂಲಕ ಕೆಳಗೆ ಇಳಿದು ಶಿರಿಬೀಡು- ಬನ್ನಂಜೆ- ಕರಾವಳಿ ಜಂಕ್ಷನ್-ರಾ.ಹೆ 66 ಮೂಲಕ ಮಂಗಳೂರಿಗೆ ಸಂಚರಿಸಬೇಕು. ಜನವರಿ 17ರಂದು ಸಂಜೆ 4 ಗಂಟೆಯಿಂದ ಕುಂದಾಪುರ ಕಡೆಯಿಂದ ಉಡುಪಿಗೆ ಬರುವ ಎಲ್ಲಾ ಖಾಸಗಿ ಬಸ್ಸುಗಳು ಸಂತೆಕಟ್ಟೆ- ಅಂಬಾಗಿಲು- ನಿಟ್ಟೂರು- ಕರಾವಳಿ ಜಂಕ್ಷನ್- ಬನ್ನಂಜೆ- ಶಿರಿಬೀಡು- ಸಿಟಿ ಬಸ್ಸು ನಿಲ್ದಾಣ- ಐರೋಡಿ ಮೂಲಕ ಸರ್ವಿಸ್ ಬಸ್ಸು ನಿಲ್ದಾಣ ತಲುಪಬೇಕು. ಅಲ್ಲಿಂದ ಕಿದಿಯೂರು ಹೋಟೆಲ್ ಮೂಲಕ ಕೆಳಗೆ ಇಳಿದು ಶಿರಿಬೀಡು- ಬನ್ನಂಜೆ -ಕರಾವಳಿ ಜಂಕ್ಷನ್ -ರಾಷ್ಟ್ರೀಯ ಹೆದ್ದಾರಿ 66 ಮೂಲಕ ಕುಂದಾಪುರಕ್ಕೆ ಸಂಚರಿಸಬೇಕು.
Trending
- ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ವಿಭಾಗಕ್ಕೆ ನೂತನ ಪದಾಧಿಕಾರಿಗಳ ನೇಮಕ
- ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಹಿಲ್ಡಾ ಆಳ್ವ ನಿಧನಕ್ಕೆ ಜೆಡಿಎಸ್ ಜಿಲ್ಲಾ ಘಟಕದ ತೀವ್ರ ಸಂತಾಪ
- ₹1.5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಪಿಡಿಒ ಲೋಕಾಯುಕ್ತ ಬಲೆಗೆ
- ಎ.ಪಿ.ಎಂ.ಸಿ. ಪ್ರಾಂಗಣದಲ್ಲಿನ ಮರಗಳಿಗೆ ರಾಸಾಯನಿಕ ಹಿಂಸೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ
- ಮುತ್ತತ್ತಿಯ ಕಾವೇರಿಯಲ್ಲಿ ದುರಂತ: ಒಂದೇ ಕುಟುಂಬದ ಐವರ ಜೀವ ಬಲಿ
- ಲೈಂಗಿಕ ಕಿರುಕುಳ ಆರೋಪಕ್ಕೆ ಬಿಗಿ ಕ್ರಮ: ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಫಾರ್ಮಸಿ ಅಧಿಕಾರಿ ಅಮಾನತು
- ಎಂಸಿಸಿ ಬ್ಯಾಂಕ್ ವ್ಯವಹಾರ ವಹಿವಾಟು ₹1,535 ಕೋಟಿಗೆ ಏರಿಕೆ : ಅಧ್ಯಕ್ಷ ಅನಿಲ್ ಲೋಬೊ
- ಶರಣಾಗಲು ಸಿದ್ಧನಿದ್ದ ವ್ಯಕ್ತಿಯ ಎನ್ಕೌಂಟರ್? ಭರತ್ ಭೂಷಣ ತಿವಾರಿ ಪ್ರಕರಣಕ್ಕೆ ಭಾರೀ ಟ್ವಿಸ್ಟ್ – ಪೊಲೀಸರ ಲೋಪ ಒಪ್ಪಿಕೊಂಡ ಎಡಿಜಿಪಿ, ಐವರು ಅಧಿಕಾರಿಗಳ ಅಮಾನತು!
