ಕುಂದಾಪುರ: ಎಟಿಎಂ ಕೇಂದ್ರದಿಂದ ಹಣ ತೆಗೆಯುಲು ಸಹಾಯ ಮಾಡುವ ನೆಪದಲ್ಲಿ ಗ್ರಾಹಕರ ಕಣ್ಣು ತಪ್ಪಿಸಿ ಅವರ ಎಟಿಎಂ ಕಾರ್ಡ್ ಬಳಸಿ ಹಣ ಎಗರಿಸುತ್ತಿದ್ದ ಇಬ್ಬರು ಹರಿಯಾಣ ಮೂಲದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಮೂರು ಪ್ರಕರಣಗಳು ಬೈಂದೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ದೂರು ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರ ತಂಡ ಹರಿಯಾಣ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಹರಿಯಾಣ ರಾಜ್ಯ ಬರ್ಸಿ ಜಟಾನ್ನ ಸಂದೀಪ್ (36), ಹರಿಯಾಣ ಔರಂಗನಗರದ ರವಿ (27) ಬಂಧಿತ ಆರೋಪಿಗಳಾಗಿದ್ದು ಇವರಿಂದ 21 ಸಾವಿರ ನಗದು, 217 ಎಟಿಎಂ ಕಾರ್ಡ್, ಪಿಒಎಸ್ ಯಂತ್ರ, 2 ಮೊಬೈಲ್ ಹಾಗೂ ಒಂದು ಮೋಟಾರ್ ಸೈಕಲ್ನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ಮೇಲೆ ವಿವಿಧ ರಾಜ್ಯಗಳಲ್ಲಿ 20ಕ್ಕೂ ಅಧಿಕ ಪ್ರಕರಣ ದಾಖಲಾಗಿರುವುದು ತನಿಖೆ ವೇಳೆ ತಿಳಿದುಬಂದಿದೆ.ಇವರು ಶಿರೂರು ಭಾಗದ ಎರಡು ಎಟಿಎಂ ಹಾಗೂ ಬೈಂದೂರಿನ ಒಂದು ಎಟಿಎಂ ಕೇಂದ್ರದಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ನೈಜ ಗ್ರಾಹಕರಿಗೆ ಹಣ ವಿಥ್ ಡ್ರಾ ಮಾಡಲು ಸಹಕಾರ ಮಾಡುವ ನೆಪದಲ್ಲಿ ಬೇರೆ ಎಟಿಎಂ ಕಾರ್ಡ್ ನೀಡಿ ಮೂರು ಕಡೆ ಒಟ್ಟು 2 ಲಕ್ಷದ 26 ಸಾವಿರ ಹಣ ಎಗರಿಸಿದ್ದರು. ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
Trending
- ಸಹಕಾರಿ ಸಪ್ತಾಹ–2026ರ ಅಂಗವಾಗಿ ತೌಳವ ಸಹಕಾರ ಪ್ರಶಸ್ತಿ ಪ್ರದಾನ ಸಮಾರಂಭ ಸಹಕಾರ ಕ್ಷೇತ್ರದ ಸಾಧಕರಿಗೆ ಗೌರವದ ಸನ್ಮಾನ; ಅರ್ಹ ಸಾಧಕರಿಂದ ಶಿಫಾರಸಿಗೆ ಮನವಿ
- ₹110 ಕೋಟಿ ವೆಚ್ಚದ ನೂತನ ಜಿಲ್ಲಾ ಆಸ್ಪತ್ರೆಗೆ ಹಳೆಯ ವೈದ್ಯಕೀಯ ಪರಿಕರ ಬೇಡ! ₹9 ಕೋಟಿ ಅನುದಾನದ ಬಳಕೆ ಕುರಿತು ಬಹಿರಂಗಪಡಿಸಿ: ತುಳುನಾಡ ರಕ್ಷಣಾ ವೇದಿಕೆ ಆಗ್ರಹ
- ಸಹಕಾರ ಸಪ್ತಾಹದ ಅಂಗವಾಗಿ ರಾಜ್ಯಮಟ್ಟದ ಪ್ರಬಂಧ ಮತ್ತು ಭಾಷಣ ಸ್ಪರ್ಧೆ ನವೆಂಬರ್ 7ರೊಳಗೆ ನೋಂದಣಿಗೆ ಅವಕಾಶ; ವಿದ್ಯಾರ್ಥಿಗಳು, ಸರ್ಕಾರಿ ನೌಕರರು ಹಾಗೂ ಸಾರ್ವಜನಿಕರಿಗೆ ಆಹ್ವಾನ
- ನವರಾತ್ರಿ ಸಂಭ್ರಮ: ಹಿರಿಯಡ್ಕ ಶ್ರೀ ವೀರಭದ್ರ ದೇವಸ್ಥಾನದಲ್ಲಿ ಆಕರ್ಷಕ ರಂಗೋಲಿ ತುಳುನಾಡ ರಕ್ಷಣಾ ವೇದಿಕೆ ಕಾಪು ಮಹಿಳಾ ಘಟಕದಿಂದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಸೇವೆ
- ಎಸ್ಸಿಡಿಸಿಸಿ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಶ್ರದ್ಧಾಭಕ್ತಿಯ ಆಯುಧ ಪೂಜೆ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಉಪಸ್ಥಿತಿಯಲ್ಲಿ ವಾಹನಗಳು, ಯಂತ್ರೋಪಕರಣಗಳಿಗೆ ಪೂಜೆ
- “ಅವಧಿ ಮೀರಿದ ಆಹಾರ ಮಾರಾಟಕ್ಕೆ ಕಡಿವಾಣ ಹಾಕಿ: ಆಹಾರ ಸುರಕ್ಷತಾ ಅಧಿಕಾರಿಗಳ ಕಾರ್ಯಕ್ಕೆ ಯೋಗಿಶ್ ಶೆಟ್ಟಿ ಜಪ್ಪು ಮೆಚ್ಚುಗೆ”
- ಪಿಲಿನಲಿಕೆ-11 ಹುಲಿವೇಷ ಸ್ಪರ್ಧೆಗೆ ಸಜ್ಜಾದ ಮಂಗಳೂರು ವಿಜೇತ ತಂಡಕ್ಕೆ ₹10 ಲಕ್ಷ ನಗದು ಬಹುಮಾನ – 9 ಪ್ರತಿಷ್ಠಿತ ತಂಡಗಳ ನಡುವೆ ಪೈಪೋಟಿ ಅಕ್ಟೋಬರ್ 20ರಂದು ಕರಾವಳಿ ಉತ್ಸವ ಮೈದಾನದಲ್ಲಿ ಅದ್ಧೂರಿ ಆಯೋಜನೆ | ದಿನೇಶ್ ಕಾರ್ತಿಕ್, ಗ್ರೇಟ್ ಕಾಲಿ ಸೇರಿದಂತೆ ಖ್ಯಾತ ತಾರೆಯರ ಆಗಮನದ ನಿರೀಕ್ಷೆ
- ಭವಾನಿ ಫೌಂಡೇಶನ್ ಟ್ರಸ್ಟ್ನ ನೂತನ ಅಧ್ಯಕ್ಷರಾಗಿ ಧರ್ಮಪಾಲ ಯು. ದೇವಾಡಿಗ ಆಯ್ಕೆ ತುಳು ಭಾಷೆ, ಸಂಸ್ಕೃತಿ ಹಾಗೂ ಸಮಾಜಸೇವೆಯಲ್ಲಿ ಗಣನೀಯ ಕೊಡುಗೆ
