ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಾರ್ಮಿಕ ಘಟಕದ ಸಭೆ ಜಯ ಪೂಜಾರಿ ಲಕ್ಷ್ಮಿ ನಗರ ರವರ ಅಧ್ಯಕ್ಷತೆಯಲ್ಲಿ ದಿನಾಂಕ 10-11-2024 ರಂದು ಉಡುಪಿ ಜಿಲ್ಲಾ ಕಚೇರಿಯಲ್ಲಿ ಜರಗಿತು . ಸಭೆಯಲ್ಲಿ ಕಾರ್ಮಿಕ ಘಟಕ ಬಲಪಡಿಸುವ ಬಗ್ಗೆ ಸಮಾಲೋಚನೆ ನಡೆಸಲಾಯಿತು, ತುಳುನಾಡು ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರು ಹಲವಾರು ಪ್ರಮುಖ ವಿಷಯಗಳ ಬಗ್ಗೆ ಕಾರ್ಮಿಕ ಘಟಕ ಜಿಲ್ಲಾ ಪದಾಧಿಕಾರಿಗಳ ಗಮನಸೆಳೆದರು ಹಾಗೂ ಹೊಸದಾಗಿ ಸೇರ್ಪಡೆಗೊಂಡ ಸದಸ್ಯರಿಗೆ ಪ್ರೋತ್ಸಾಹದಾಯಕ ಮಾತುಗಳನ್ನಾಡಿದರು.
ಉಡುಪಿ ಜಿಲ್ಲಾ ಅಧ್ಯಕ್ಷ ಕೃಷ್ಣಕುಮಾರ್, ಉಡುಪಿ ಜಿಲ್ಲಾ ವೀಕ್ಷಕ ಫ್ರ್ಯಾಂಕಿ ಡಿಸೋಜಾ ಕೊಳಲಗಿರಿ, ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ಶೋಭಾ ಪಾಂಗಳ, ಕಾರ್ಮಿಕ ಘಟಕ ಉಪಾಧ್ಯಕ್ಷ ಕುಶಲ ಆಮೀನ್, ಕಾರ್ಮಿಕ ಘಟಕ ಪ್ರಧಾನ ಕಾರ್ಯದರ್ಶಿ ಅವಿನಾಶ್ ಮಾಸ್ಟರ್ , ಕಾರ್ಮಿಕ ಘಟಕ ಸಂಘಟನಾ ಕಾರ್ಯದರ್ಶಿ ರೋಷನ್ ಬಂಗೇರ , ಜೊತೆ ಕಾರ್ಯದರ್ಶಿ ಮೊಹಮ್ಮದ್ ಮಜೀದ್ , ಮಹಿಳಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮಿ , ಮಹಿಳಾ ಜಿಲ್ಲಾ ಕೋಶಾಧಿಕಾರಿ ಸುನಂದ ಕೋಟ್ಯಾನ್ , ಮಹಿಳಾ ಮುಖಂಡರುಗಳಾದ ಜ್ಯೋತಿ ಉಡುಪಿ, ಮಮತಾ ಸುಶೀಲಾ ಜ್ಯೋತಿ ಸಾಸ್ತಾನ , ಲಕ್ಷ್ಮೀಬಾಯಿ ರವಿಜಾ ಶ್ಯಾಮಲ ನಿರ್ಮಲ ಸುಶೀಲ ನಂದನ ಮತ್ತಿತರರು ಉಪಸ್ಥಿತರಿದ್ದರು. ಸಭೆಯಲ್ಲಿ ಮಾಧವ ತೋಳಾರ್, ಪುರಂದರ ಕುಂದರ್ , ಬಿಕೆ ಮಂಜುನಾಥ್, ಬಿ ಬಾಲರಾಜ್ , ರಾಯಪ್ಪ ನಾಗಪ್ಪ , ಅಕ್ಕಮ್ಮ , ಅಕ್ಷತಾ , ಸರೋಜಾ ಮತ್ತಿತರರು ಸಂಘಟನೆಗೆ ಸೇರ್ಪಡೆಗೊಂಡರು, ಅವರನ್ನು ಶಾಲು ಹಾಕಿ ಸಂಘಟನೆ ಬರಮಾಡಿಕೊಳ್ಳಲಾಯಿತು.
Trending
- ಭಾರತ ದಾಳಿಗೆ ಪಾಕಿಸ್ತಾನ ತತ್ತರ
- ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ
- ತೌಲೊ ಜಿಯನ್ಸೂವಿನಲ್ಲಿ ಕು.ಮನ್ವಿತ ಮನೋಜ್ ಕುಮಾರ್ ಗೆ ಚಿನ್ನದ ಪದಕ
- Kannada Sangha Bahrain has elected a new Executive Committee
- ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ಕರುನಾಡ ಕಾಯಕ ಯೋಗಿ ಸದ್ಭಾವನ ರಾಜ್ಯಪ್ರಶಸ್ತಿಗೆ ಆಯ್ಕೆ
- ಸಿಂಧೂರ ಆಪರೇಷನ್ ಮೂಲಕ ಪಾಕಿಸ್ತಾನಕ್ಕೆ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆ.
- ಉಲಾಯಿ ಪಿದಾಯಿ ಜುಗಾರಿ ಆಟ : ಐದು ಮಂದಿ ಉಲಾಯಿ…!!
- ಯಕ್ಷಗಾನ ಮತ್ತು ಸಾಮಾಜಿಕ ಧುರೀಣ ಪಣಿಯೂರು ಕರುಣಾಕರ ಶೆಟ್ಟರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ