ಮಂಗಳೂರು : ಗ್ರಾಮಸ್ಥರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದಾಗಲೇ ಮಂಗಳೂರು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸರಿಗೆ ಸಿಕ್ಕಿ ಬಿದ್ದ ಕಡಬ ತಾಲೂಕಿನ ಐತೂರು ಗ್ರಾಮ ಪಂಚಾಯತ್ ಪಿಡಿಒ ಪ್ರೇಮ್ ಸಿಂಗ್ ಅವರಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು 3 ವರ್ಷಗಳ ಸಾದಾ ಸಜೆ ಹಾಗೂ 50,000 ರೂ. ದಂಡ ವಿಧಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿ ಡಿವೈಎಸ್‌ಪಿಯಾಗಿದ್ದ ಮಂಜುನಾಥ ಬಿ. ಕವರಿ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕರಾದ ಮೋಹನ್ ಕೊಟ್ಟಾರಿ ಮತ್ತು ಯೋಗೀಶ್ ತನಿಖಾಧಿಕಾರಿಗಳಾಗಿದ್ದರು. ಪೊಲೀಸ್ ನಿರೀಕ್ಷಕ ಶ್ಯಾಮ ಸುಂದರ್ ಎಚ್.ಎಂ. ಅವರು ಆರೋಪಿಯ ವಿರುದ್ಧ ದೋಷಾರೋಪಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ರವೀಂದ್ರ ಮುನ್ನಿಪಾಡಿ ಅವರು ಸರಕಾರದ ಪರವಾಗಿ ವಾದ ಮಂಡಿಸಿದ್ದರು.