ನವದೆಹಲಿ: ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್ ಸಿಂಗ್ (92) ಅವರು ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು.
ಆರೋಗ್ಯ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಸಿಂಗ್ ಅವರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ಕರೆತರಲಾಗಿತ್ತು.
ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಕಾರಣ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿತ್ತು. ಆದರೆ, ರಾತ್ರಿ ಹೊತ್ತಿಗೆ ಅವರು ಕೊನೆಯುಸಿರೆಳೆದಿದ್ದಾರೆ.
ಮನಮೋಹನ್ ಸಿಂಗ್ ಅವರು 1991-96ರ ಅವಧಿಯಲ್ಲಿ ಪಿವಿ ನರಸಿಂಹರಾವ್ ನೇತೃತ್ವದ ಸರ್ಕಾರದಲ್ಲಿ ದೇಶದ ಹಣಕಾಸು ಸಚಿವರಾಗಿ ಪ್ರಾಮುಖ್ಯತೆಯನ್ನು ಗಳಿಸಿದರು. ಆರ್ಥಿಕತೆಯನ್ನು ಪರಿವರ್ತಿಸುವ ವ್ಯಾಪಕ ಸುಧಾರಣೆಗಳನ್ನು ತಂದರು
ಯುಪಿಎಯ ಎರಡು ಅವಧಿಯ ಪ್ರಧಾನಿಯಾಗಿ ಅವರು (2004 ಮತ್ತು 2014) ಸೇವೆ ಸಲ್ಲಿಸಿದರು. ಈ ವರ್ಷದ (2024) ಆರಂಭದ ವರೆಗೆ ರಾಜ್ಯಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದರು. ಏಪ್ರಿಲ್ನಲ್ಲಿ ರಾಜ್ಯಸಭೆಯಿಂದ ನಿವೃತ್ತರಾದರು. ಗಾಂಧಿ ಕುಟುಂಬ ಹೊರತು ಪಡಿಸಿ ಕಾಂಗ್ರೆಸ್ನಲ್ಲಿ ಹೆಚ್ಚು ಅವಧಿಯ ಪ್ರಧಾನಿ ಆಗಿದ್ದ ಹೆಗ್ಗಳಿಕೆ ಇವರದ್ದು.
Trending
- ಕಾರ್ಕಳ ಮಾಜಿ ಶಾಸಕ, ದಿ. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (40) ಆತ್ಮಹತ್ಯೆ
- “ಕಾಂತಾರ” ಸಿನಿಮಾದಲ್ಲಿ ದೈವಗಳಿಗೆ ಅಪಚಾರ ಆಗಿಲ್ಲ: ಐಕಳ ಹರೀಶ್ ಶೆಟ್ಟಿ ಸ್ಪಷ್ಟನೆ
- ಬಂಟರ ಸಂಘ (ರಿ.) ಬಜಪೆ ವಲಯದ ಅಧ್ಯಕ್ಷರಾಗಿ ಶ್ರೀ ವೇಣುಗೋಪಾಲ್ ಶೆಟ್ಟಿ ಆಯ್ಕೆ
- ಕಂಬಳಕ್ಕೆ 2 ಕೋಟಿ ಅನುದಾನ ಮೀಸಲು : ಐಪಿಎಲ್ ಮಾದರಿಯಲ್ಲಿ ಕಂಬಳ ಆಯೋಜನೆ ಚಿಂತನೆ
- ಮಂಗಳೂರಲ್ಲಿ ಖ್ಯಾತ ಮಲಯಾಳಂ ನಟ ಜಯಕೃಷ್ಣನ್ ಬಂಧನಟೆರರಿಸ್ಟ್ ಎಂದು ಕ್ಯಾಬ್ ಚಾಲಕನಿಗೆ ಅವಮಾನ– ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲು
- ಕಾಪು ಬೀಚ್ನಲ್ಲಿ ಅಪ್ರಾಪ್ತ ಬಾಲಕನಿಗೆ ಮುತ್ತು ನೀಡಿದ ಪ್ರಕರಣ: 47 ವರ್ಷದ ವ್ಯಕ್ತಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
- ಬ್ರಹ್ಮಾವರ: ಅಕ್ರಮ ಜಲ್ಲಿಕಲ್ಲು ಸಾಗಾಟ – ಟಿಪ್ಪರ್ ಸಹಿತ ಚಾಲಕ ವಶಕ್ಕೆ!
- 📍 ತ್ರಿಶಾ ಕಾಲೇಜಿನಲ್ಲಿ ಯಶಸ್ವೀ ರಕ್ತದಾನ ಶಿಬಿರ: 70ಕ್ಕೂ ಹೆಚ್ಚು ಸ್ವಯಂಸೇವಕರಿಂದ ಮಾನವೀಯತೆ ಮೆರೆದ ಕ್ರಮ