ತುಳುನಾಡ ರಕ್ಷಣಾ ವೇದಿಕೆ ಬ್ರಹ್ಮಾವರ ತಾಲೂಕು ಅಧ್ಯಕ್ಷರಾಗಿ ಪ್ರದೀಪ್ ಪೂಜಾರಿ (ದೀಪು)ಚಾಂತಾರ್, ಉಪಾಧ್ಯಕ್ಷರಾಗಿ ಸಂದೇಶ್ ಶೆಟ್ಟಿ ಹೇರೂರು,


ಪ್ರಧಾನ ಕಾರ್ಯದರ್ಶಿಯಾಗಿ ಶರತ್ ರಾಜ್ ಆರೂರು, ಮತ್ತು ಕೋಶಾಧಿಕಾರಿಯಾಗಿ ನಿತಿನ್ ಶೆಟ್ಟಿ ಪೇತ್ರಿ

ರವರನ್ನು ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿರವರು ಮತ್ತು ಪ್ರಧಾನ ಕಾರ್ಯದರ್ಶಿ ಸುರೇಂದ್ರ ಪೂಜಾರಿ ಹಾವಂಜೆ ರವರ ಶಿಫಾರಸು ಮೇರೆಗೆ ಆಯ್ಕೆಮಾಡಲಾಗಿದೆ. ಇವರ ಆಯ್ಕೆ ಯಿಂದ
ಬ್ರಹ್ಮಾವರ ತಾಲೂಕುನಲ್ಲಿ ತುಳುನಾಡ ರಕ್ಷಣಾ ವೇದಿಕೆ ಇನ್ನಷ್ಟು ಬಲಿಷ್ಠವಾಗಿ ಬೆಳೆಯಲು , ತುಳು ಅಚಾರ ವಿಚಾರ, ಸಂಸ್ಕೃತಿ ಮತ್ತು ಬ್ರಹ್ಮಾವರ ಸರ್ವತೋಮುಖ ಅಭಿವೃದ್ಧಿಯಾಗಲು ಜನರ ಬೇಡಿಕೆ ಈಡೇರಿಕೆಗೆ ಹೋರಾಟ ಮಾಡಲು ಬಲ ಬಂದಂತಾಗಿದೆ. ಎಂದು ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ರವರು ತಿಳಿಸಿದರು. ಬ್ರಹ್ಮಾವರ ತಾಲೂಕು ನಿಕಟಪೂರ್ವ ಅಧ್ಯಕ್ಷ ಸತೀಶ್ ಪೂಜಾರಿ ಕೀಳಂಜೆ, ಜಿಲ್ಲಾ ಹಿರಿಯ ಉಪಾಧ್ಯಕ್ಷ ಜಯರಾಮ್ ಪೂಜಾರಿ, ವೈದ್ಯರ ಘಟಕ ಜಿಲ್ಲಾಧ್ಯಕ್ಷ ಸಂದೀಪ್ ಸನಿಲ್, ಕಾರ್ಮಿಕ ಘಟಕ ಜಿಲ್ಲಾಧ್ಯಕ್ಷ ಜಯ ಪೂಜಾರಿ ಲಕ್ಷ್ಮಿನಗರ, ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ಸುನಂದ ಕೋಟ್ಯಾನ್ ರವರು ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದ್ದಾರೆ.
