ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನ ಸಮಿತಿ (ರಿ) ಹಾಗೂ ತುಳುನಾಡ ರಕ್ಷಣಾ ವೇದಿಕೆ (ರಿ) ಸಹಯೋಗದೊಂದಿಗೆ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ದಿನಾಂಕ 15-08-2025 ರಂದು ಶುಕ್ರವಾರ ಪೂರ್ವಾಹ್ನ 10.30 ಕ್ಕೆ ಬಾವುಟ ಗುಡ್ಡೆ ಮುಂಭಾಗದಲ್ಲಿ ನಡೆಯಲಿದೆ. ಜಿಲ್ಲೆಯ ಸಚಿವರು, ಮಾಜಿ ಸಚಿವರು, ಸಂಸತ್ ಸದಸ್ಯರು, ಶಾಸಕರು, ಹಲವಾರು ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ಸರ್ವರೂ ಆಗಮಿಸಿ ಯಶಸ್ವಿಗೊಳಿಸಬೇಕೆಂದು ಕಿರಣ್ ಬುಡ್ಲೆಗುತ್ತು ಮತ್ತು ಯೋಗೀಶ್ ಶೆಟ್ಟಿ ಜಪ್ಪು ರವರು ವಿನಂತಿಸಿದ್ದಾರೆ.
