ಕೋಟ : ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಗ್ರಾಮದಲ್ಲಿರುವ ಗುರು ನರಸಿಂಹ ದೇವಾಲಯದ ಕೆರೆಯ ಹತ್ತಿರದ ಮನೆಯೊಂದರಲ್ಲಿ ನಡೆಯುತ್ತಿದ್ದ ಇಸ್ಪೀಟು ಜುಗಾರಿ ಆಟದ ಮೇಲೆ ಕೋಟ ಪೊಲೀಸರು ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ಎಂಟು ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಸಾಲಿಗ್ರಾಮದ ಸತೀಶ, ರಘು ಸಾಲಿಗ್ರಾಮ, ಚೇತನ ಕಾರ್ಕಡ, ಹರೀಶ, ಜನಾರ್ಧನ ಬಾರ್ಕೂರು, ಸನ್ನಿಧಾನ, ಪ್ರಸಾದ್ ಹಾಗೂ ನವೀನ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಎಲ್ಲರೂ ಸ್ಥಳೀಯ ನಿವಾಸಿಗಳು ಎಂದು ತಿಳಿದುಬಂದಿದೆ.
ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕ ಪ್ರವೀಣ್ ಕುಮಾರ್ ಆರ್ ಅವರ ನೇತೃತ್ವದಲ್ಲಿ ಸೆಪ್ಟೆಂಬರ್ 2 ರಂದು ರಾತ್ರಿ ಸುಮಾರು 1 ಗಂಟೆ ಸಮಯದಲ್ಲಿ ದಾಳಿ ನಡೆಸಲಾಯಿತು. ಈ ವೇಳೆ ಇಸ್ಪೀಟು ಆಟದಲ್ಲಿ ತೊಡಗಿದ್ದವರಲ್ಲಿ 8 ಮಂದಿ ಸಿಕ್ಕಿಹಾಕಿಕೊಂಡರು.
ಬಂಧಿತರಿಂದ ₹14,130 ನಗದು, ಒಂದು ಬೆಡ್ಶೀಟ್, 7 ಮೊಬೈಲ್ ಫೋನ್ಗಳು ಮತ್ತು ಇಸ್ಪೀಟು ಎಲೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೋಲೀಸರ ಈ ಕಾರ್ಯಾಚರಣೆಗೆ ಸ್ಥಳೀಯರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
