ಮಂಗಳೂರು, ಸೆಪ್ಟೆಂಬರ್ 14: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 14 ರಿಂದ 16ರ ವರೆಗೆ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು, ಮೆರವಣಿಗೆಗಳು, ಮತ್ತು ಮೊಸರುಕುಡಿಕೆ ಉತ್ಸವಗಳು ನಡೆಯಲಿವೆ.
ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ವ್ಯತ್ಯಯ ಉಂಟಾಗದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರು ಎತ್ತಂಗಡಿಗಳನ್ನು ಬಂದ್ ಮಾಡುವಂತೆ ಆದೇಶ ಹೊರಡಿಸಿದ್ದಾರೆ. ಮದ್ಯ ಸೇವನೆಯಿಂದಾಗಿ ಕಿಡಿಗೇಡಿಗಳು ಗಲಭೆ ಸೃಷ್ಟಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಆದೇಶದಡಿಯಲ್ಲಿ, ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಬಾರ್, ವೈನ್ ಶಾಪ್ಗಳು ಹಾಗೂ ಲೈಸನ್ಸ್ ಹೊಂದಿರುವ ಮದ್ಯದಂಗಡಿಗಳು ಸೆಪ್ಟೆಂಬರ್ 14ರಿಂದ 16ರ ವರೆಗೆ ಮುಚ್ಚಿರಬೇಕು. ಈ ಅವಧಿಯಲ್ಲಿ ಯಾವುದೇ ರೀತಿಯ ಮದ್ಯ ಮಾರಾಟವೂ ನಿಷಿದ್ಧವಾಗಿದೆ.
ಜಿಲ್ಲಾ ಆಡಳಿತ ಹಾಗೂ ಪೊಲೀಸ್ ಇಲಾಖೆ ಶಾಂತಿಯುತ ಉತ್ಸವಕ್ಕೆ ತಯಾರಿ ನಡೆಸುತ್ತಿದ್ದು, ಸಾರ್ವಜನಿಕರು ಸಹಕಾರ ನೀಡುವಂತೆ ಕೋರಲಾಗಿದೆ.
