ಮೂಡುಬಿದಿರೆ, ನಿಡ್ಡೋಡಿ:
ಇಬ್ಬರು ಅಪ್ರಾಪ್ತ ಬಾಲಕಿಯರೊಂದಿಗೆ ಯುವಕರ ತಂಡವೊಂದು ಮನೆಯೊಂದರಲ್ಲಿ ಅನುಚಿತ ಚಟುವಟಿಕೆಗಳಲ್ಲಿ ತೊಡಗಿದಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಮೂಡುಬಿದಿರೆ ಪೊಲೀಸರು ದಾಳಿ ನಡೆಸಿ, ನಾಲ್ವರನ್ನು ಬಂಧಿಸಿರುವ ಘಟನೆ ನಿಡ್ಡೋಡಿಯಲ್ಲಿ ನಡೆದಿದೆ.
ಬಂಧಿತರನ್ನು ನಿಡ್ಡೋಡಿಯ ಮಹೇಶ್, ಕಟೀಲು ಪರಿಸರದ ಯಜ್ನೇಶ್, ದಿಲೀಪ್ ಹಾಗೂ ಶ್ರೀಕಾಂತ್ ಎಂದು ಗುರುತಿಸಲಾಗಿದೆ.
ಅವರಿಬ್ಬರು ಅಪ್ರಾಪ್ತ ಬಾಲಕಿಯರೊಂದಿಗೆ ಮಹೇಶ್ ನಿಡ್ಡೋಡಿಯಲ್ಲಿ ವಾಸಿಸುತ್ತಿದ್ದ ಮನೆಯಲ್ಲಿ ಸೇರಿದ್ದರಿಂದ, ಇದೇ ಮನೆ ಅಕ್ರಮ ಚಟುವಟಿಕೆಗಳಿಗೆ ಕೇಂದ್ರವಾಗಿದ್ದೆಂದು ಪೊಲೀಸರು ತಿಳಿಸಿದ್ದಾರೆ.
ದಾಳಿ ನಡೆಸಿದ ತಂಡಕ್ಕೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರು ನೇತೃತ್ವ ವಹಿಸಿದ್ದರು. ಆರೋಪಿಗಳನ್ನು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದಾಗ, ಎಲ್ಲ ಮಾಹಿತಿ ಬಾಯಿಬಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಸಂಬಂಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪೊಕ್ಸೋ (POCSO) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ.
ಸಮಯಪ್ರಜ್ಞೆಯಿಂದ ತಕ್ಷಣ ದಾಳಿ ನಡೆಸಿದ ಇನ್ಸ್ಪೆಕ್ಟರ್ ಸಂದೇಶ್ ಹಾಗೂ ಅವರ ತಂಡದ ಕಾರ್ಯಪ್ರವೃತ್ತಿಗೆ ಸ್ಥಳೀಯರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
