ಮಂಗಳೂರು : ಕೃಷಿ ಬದುಕಿಗೆ ಬೆಸೆದು ಕೊಂಡಿರುವ ದೀಪಾವಳಿ ಹಬ್ಬವು ಪ್ರೀತಿ ಮತ್ತು ಭಾವೈಕ್ಯತೆಯಿಂದ ಎಲ್ಲರನ್ನೂ ಜೊತೆಗೂಡಿಸುವ ಹಬ್ಬವಾಗಿದೆ ಎಂದು ತುಳು ಪರಿಷತ್ತು ಅಧ್ಯಕ್ಷ ಶುಭೋದಯ ಆಳ್ವ ಹೇಳಿದರು.
ಅವರು ಮಂಗಳೂರಿನ ಬಿಕರ್ಣಕಟ್ಟೆ ಕಲ್ಪನೆಯ ಐಕ್ಯಂ ವಿಶೇಷ ಮಕ್ಕಳ ತರಬೇತಿ ಕೇಂದ್ರದಲ್ಲಿ ತುಳು ಪರಿಷತ್ ವತಿಯಿಂದ ಆಯೋಜಿಸಲಾದ ದೀಪಾವಳಿ ಆಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಮಾರಂಭದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್, ತುಳು ಪರಿಷತ್ತು ಉಪಾಧ್ಯಕ್ಷ ಡಾ. ಮೀನಾಕ್ಷಿ ರಾಮಚಂದ್ರ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಚಂದ್ರಕಲಾ ರಾವ್ ಶುಭಕೋರಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಐಕ್ಯಂ ಸಂಸ್ಥೆಯ ಅಧ್ಯಕ್ಷೆ ಕಮಲಾಕ್ಷಿ ಕುಂದರ್, ಕಾರ್ಯದರ್ಶಿ ಸಂತೋಷ್ ಕುಮಾರ್ , ಟ್ರಸ್ಟಿ ಪದ್ಮನಾಭ ಕೆ .ಸಾಲಿಯಾನ್ , ಸಂಸ್ಥೆಯ ಹಿತೈಷಿ ಉಮನಾಥ ಕೊಟ್ಟಾರಿ ಅವರು ಸೇರಿದಂತೆ ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.
ತುಳು ಪರಿಷತ್ ಸದಸ್ಯರಾದ ಸುಮತಿ ಹೆಗ್ಡೆ , ಅಮಿತಾ ಅಶ್ವಿನ್ , ದುರ್ಗಾ ಪ್ರಸಾದ್, ರಮೇಶ್ ಮಂಚಕಲ್, ರಾಕೇಶ್ ಕುಂದರ್, ಶಾಲಿನಿ ರೈ, ಶ್ರೀನಿವಾಸ್, ನ್ಯಾನ್ಸಿ ನೋರೋನ್ಹ, ಮೀರಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Trending
- ಡಿಸೆಂಬರ್ 5 ರಂದು ಬೆಳಿಗ್ಗೆ 8.55ಕ್ಕೆ ಶಿಲಾನ್ಯಾಸ ಕಾರ್ಯಕ್ರಮ
- ಯಕ್ಷಗಾನ ತಾಳಮದ್ದಳೆ ಸಪ್ತಾಹ ಸಮಾರೋಪ – ಯಕ್ಷಾಂಗಣ ಪ್ರಶಸ್ತಿ ಪ್ರದಾನ
- “ಎಂಸಿಎಫ್ ಹೆಸರು ಉಳಿಸಿ” ಅಭಿಯಾನ – ಐತಿಹಾಸಿಕ ಮೊದಲ ಸಭೆ ಮಂಗಳೂರಿನಲ್ಲಿ ಯಶಸ್ವಿ
- ಕಾಪು : ರಾಷ್ಟ್ರೀಯ ಹೆದ್ದಾರಿ–66ರಲ್ಲಿ ಭೀಕರ ಅಪಘಾತ – ನಾಲ್ವರು ಸ್ಥಳಾಂತರಿಸುವ ವೇಳೆ ಮೃತ್ಯು
- ತೀಯಾ ಸಮುದಾಯದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಅಗತ್ಯ – ಸದಾಶಿವ ಉಳ್ಳಾಲ್
- ಡಿ.ಕೆ. ಟ್ರಾನ್ಸ್ಪೋರ್ಟ್ & ಲಾಜಿಸ್ಟಿಕ್ ಸರ್ವೀಸಸ್ – ಹೊಸ ಕಚೇರಿ ಉದ್ಘಾಟನೆ
- ಪಿಲಿಪಂಜ” ತುಳು ಚಲನಚಿತ್ರದ ಎರಡನೇ ಹಾಡಾದ ಫ್ರೆಂಡ್ಷಿಪ್ ಸಾಂಗ್, ಭಾನುವಾರ ಮಂಗಳೂರಿನ ಭಾರತ್ ಮಾಲ್ನಲ್ಲಿ ಅದ್ಧೂರಿಯಾಗಿ ಬಿಡುಗಡೆ
- ಉಡುಪಿ: ಪ್ರಧಾನಿ ನರೇಂದ್ರ ಮೋದಿ ಭವ್ಯ ರೋಡ್ ಶೋ – ಜನಸಾಗರದ ನಡುವೆ ಭಾವಪೂರ್ಣ ಸ್ವಾಗತ

