ವಾಮಂಜೂರು: ಖ್ಯಾತ ಉದ್ಯಮಿ ತಿರುವೈಲು ಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ ಹಾಗೂ ಯುವ ಉದ್ಯಮಿ ಅಭಿಷೇಕ್ ಆಳ್ವ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ.
ನವೆಂಬರ್ 6ರಂದು ಮಧ್ಯಾಹ್ನ ಬಪ್ಪನಾಡು ಸೇತುವೆ ಬಳಿ ಅವರ ಕಾರು ಪತ್ತೆಯಾಗಿದ್ದು, ಬಳಿಕ ಅವರು ನಾಪತ್ತೆಯಾಗಿದ್ದರು. ಶೋಧ ಕಾರ್ಯ ನಡೆಸಿದ ಬಳಿಕ ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಘಟನೆಯ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಹೆಚ್ಚಿನ ಮಾಹಿತಿ ಶೀಘ್ರದಲ್ಲೇ ಲಭ್ಯವಾಗಲಿದೆ.

