ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇವರು ಸಹಕಾರ ಕ್ಷೇತ್ರದ ಸಾಧಕರಿಗೆ ಕೊಡಮಾಡುವ 2025 ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿ ಹಿರಿಯ ಸಹಕಾರಿ ನಾಯಕ, ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಮಾನ್ಯ ಅಧ್ಯಕ್ಷರಾದ ಎನ್ ರಮೇಶ್ ಶೆಟ್ಟಿ ರವರಿಗೆ ಲಭಿಸಿದೆ.
ನ.14ರಂದು ಬೆಂಗಳೂರಿನ ಗಾಯತ್ರಿ ವಿಹಾರ್, ಫ್ಯಾಲೆಸ್ ಗೌಂಡ್ ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಎನ್ ರಮೇಶ್ ಶೆಟ್ಟಿಯವರು ಸಾಮಾಜಿಕ, ಸಹಕಾರ, ಧಾರ್ಮಿಕ, ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡವರು. ಸಹಕಾರ ಕ್ಷೇತ್ರದಲ್ಲಿ ಅವರು ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಂಘದ ಬೆಳವಣಿಗೆಯಲ್ಲಿ ಶ್ರಮಿಸಿದ್ದಾರೆ.

