ಮಂಗಳೂರು: ಸಹಕಾರ ಸಪ್ತಾಹ–2025ರ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ ಮತ್ತು ತುಳುನಾಡ ಸೂರ್ಯ ಪತ್ರಿಕೆ ಸಂಯುಕ್ತ ಆಶ್ರಯದಲ್ಲಿ ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನವೆಂಬರ್ 16ರಂದು ಮಂಗಳೂರಿನ ಉರ್ವಸ್ಟೋರ್ ತುಳುಭವನದ ‘ಸಿರಿ ಚಾವಡಿಯಲ್ಲಿ ನೆರವೇರಿತು. ಕಾರ್ಯಕ್ರಮಕ್ಕೆ ವೇದಿಕೆಯ ಸ್ಥಾಪಕ ಅಧ್ಯಕ್ಷ ಶ್ರೀ ಯೋಗೀಶ್ ಶೆಟ್ಟಿ ಜಪ್ಪು ಅವರು ಅಧ್ಯಕ್ಷತೆ ವಹಿಸಿದ್ದರು.
ಸಮಾರಂಭಕ್ಕೆ ಮಾಜಿ ಸಚಿವ ಶ್ರೀ ಕೃಷ್ಣ ಪಾಲೆಮಾರ್, ಮಂಗಳೂರು ದಕ್ಷಿಣ ಶಾಸಕ ಶ್ರೀ ವೇದವ್ಯಾಸ್ ಕಾಮತ್, ಅದಾನಿ ಗ್ರೂಪ್ ಅಧ್ಯಕ್ಷ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ಶ್ರೀ ಕಿಶೋರ್ ಆಳ್ವ, ಅಖಿಲ ಭಾರತ ತುಳು ಒಕ್ಕೂಟ ಅಧ್ಯಕ್ಷ ಶ್ರೀ ಎ.ಸಿ. ಭಂಡಾರಿ, ಧರ್ಮವಲೋಕನದ ಗಡಿಕಾರರು ಮತ್ತು ಅಧ್ಯಕ್ಷ ಶ್ರೀ ದೋಣಿಂಜೆ ಗುತ್ತು ಪ್ರಮೋದ್ ಕುಮಾರ್ ರೈ, ಪರಿಶಿಷ್ಟ ಜಾತಿ–ವರ್ಗಗಳ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಶ್ರೀ ಮೋಹನಂಗಯ್ಯ ಸ್ವಾಮಿ, ಕೆದಂಬಡಿ ರಾಮಯ್ಯಗೌಡ ಸ್ಮಾರಕ ಸಮಿತಿ ಅಧ್ಯಕ್ಷ ಶ್ರೀ ಕಿರಣ್ ಬುಡ್ಲೆಗುತ್ತು, ತುಳುನಾಡ ರಕ್ಷಣಾ ವೇದಿಕೆಯ ವಕೀಲರ ಘಟಕ ಅಧ್ಯಕ್ಷ ಶ್ರೀ ರಾಘವೇಂದ್ರ ರಾವ್, ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷ ಶ್ರೀ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸಹಕಾರಿ ಕ್ಷೇತ್ರದಲ್ಲಿ ಶ್ರೇಷ್ಠ ಸೇವೆ ಸಲ್ಲಿಸಿರುವ ಆಯ್ದ ಧುರೀಣರಿಗೆ 5 ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ, 5 ತೌಳವ ಸಹಕಾರಿ ರತ್ನ ಪ್ರಶಸ್ತಿ, 2 ತೌಳವ ಸಹಕಾರಿ ಸಾಧಕ ಗೌರವ ಮತ್ತು 4 ವಿಶೇಷ ತೌಳವ ಸನ್ಮಾನಗಳನ್ನು ಪ್ರದಾನ ಮಾಡಲಾಯಿತು.
ಕೋಟೆಕಾರು ಕೃಷ್ಣ ಶೆಟ್ಟಿಗೆ ತೌಳವ ಸಹಕಾರ ರತ್ನ ಪ್ರಶಸ್ತಿ ಗೌರವ ಪ್ರಧಾನ
ಸಮಾರಂಭಕ್ಕೆ ಹಾಜರಾಗಲು ಸಾಧ್ಯವಾಗದ ಕೋಟೆಕಾರು ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷ ಕೃಷ್ಣ ಶೆಟ್ಟಿ ಕೋಟೆಕಾರು ಕೆಳಗಿನಗುತ್ತು ರವರಿಗೆ, ನವೆಂಬರ್ 21ರಂದು ಕೋಟೆಕಾರು ವ್ಯವಸಾಯ ಸಹಕಾರಿ ಸಂಘದ ಕಚೇರಿಯಲ್ಲಿ ವಿಶೇಷವಾಗಿ ಗೌರವ ಸಲ್ಲಿಸಲಾಯಿತು. ಸಂಘದ ನಿರ್ದೇಶಕರು, ಉಪಾಧ್ಯಕ್ಷರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಉಪಸ್ಥಿತಿಯಲ್ಲಿ ಪ್ರಶಸ್ತಿ ಪತ್ರ, ಫಲಕ, ಶಾಲು ಮತ್ತು ಫಲಪುಷ್ಪ ನೀಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜೆ. ಇಬ್ರಾಹಿಂ, ವಿವೇಕಾನಂದ ರಾವ್, ಪ್ರಶಾಂತ್ ಭಟ್ ಕಡಬ, ಅನಿಲ್ ಪೂಜಾರಿ, ಮುನೀರ್ ಮುಕ್ಕಚೇರಿ, ರಕ್ಷಿತ್ ಕುಡುಪು ಮತ್ತಿತರರು ಉಪಸ್ಥಿತರಿದ್ದರು





