ಮಂಗಳೂರು: ಬಂಗ್ರಕೂಳೂರಿನ ಗೋಲ್ಡ್ಫಿಂಚ್ ಸಿಟಿಯಲ್ಲಿ ಮಂಗಳೂರು ಕಂಬಳ ಸಮಿತಿಯ ವತಿಯಿಂದ ಸಂಸದ ಬ್ರಿಜೇಶ್ ಚೌಟ ನೇತೃತ್ವದಲ್ಲಿ 9ನೇ ವರ್ಷದ ಮಂಗಳೂರು ಕಂಬಳ ಅದ್ದೂರಿಯಾಗಿ ನೆರವೇರಿತು. ಪರಂಪರೆ, ಸಂಭ್ರಮ ಮತ್ತು ಸ್ಪರ್ಧಾತ್ಮಕತೆಯ ಸಂಗಮವಾಗಿ ಮೂಡಿಬಂದ ಈ ಕಂಬಳ ಕೂಟದಲ್ಲಿ ಒಟ್ಟು 141 ಜೊತೆ ಕೋಣಗಳು ಭಾಗವಹಿಸಿ ಪ್ರೇಕ್ಷಕರನ್ನು ರಂಜಿಸಿವೆ.
ವಿಭಾಗವಾರು ಸ್ಪರ್ಧೆಯಲ್ಲಿ ಕನೆಹಲಗೆ ವಿಭಾಗದಲ್ಲಿ 9 ಜೊತೆ, ಅಡ್ಡಹಲಗೆ ವಿಭಾಗದಲ್ಲಿ 10 ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 17 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 26 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 19 ಜೊತೆ ಹಾಗೂ ನೇಗಿಲು ಕಿರಿಯ ವಿಭಾಗದಲ್ಲಿ 60 ಜೊತೆ ಕೋಣಗಳು ಪೈಪೋಟಿ ನಡೆಸಿದವು.
ಫಲಿತಾಂಶಗಳು:
ಅಡ್ಡಹಲಗೆ ವಿಭಾಗ
- ಪ್ರಥಮ: ಇರುವೈಲು ದೊಡ್ಡಗುತ್ತು ಜಗದೀಶ್ ಎಂ. ಶೆಟ್ಟಿ “ಎ” (11.68) – ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
- ದ್ವಿತೀಯ: ನಾರ್ಯ ಗುತ್ತು ಕುವೆತ್ತಬೈಲು ಸಂತೋಷ್ ರೈ ಬೊಳ್ಯಾರು (11.83) – ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ
ಹಗ್ಗ ಹಿರಿಯ ವಿಭಾಗ
- ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್. ಕೋಟ್ಯಾನ್ (11.41) – ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
- ದ್ವಿತೀಯ: ನಲ್ಲೂರು ಬಜಗೋಳಿ ಶಿವಪ್ರಸಾದ್ ನಿಲಯ ಪ್ರಾಣೇಶ್ ದಿನೇಶ್ ಭಂಡಾರಿ “ಎ” (11.50) – ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ
ಹಗ್ಗ ಕಿರಿಯ ವಿಭಾಗ
- ಪ್ರಥಮ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ. ಶೆಟ್ಟಿ “ಬಿ” (11.41) – ಓಡಿಸಿದವರು: ಮಂಗಲ್ಪಾಡಿ ರಕ್ಷಿತ್ ಶೆಟ್ಟಿ
- ದ್ವಿತೀಯ: ಎರ್ಮಾಳ್ ಡಾ. ಚಿಂತನ್ ರೋಹಿತ್ ಹೆಗ್ಡೆ (11.62) – ಓಡಿಸಿದವರು: ಮಿಜಾರ್ ಅಶ್ವಥಪುರ ಶ್ರೀನಿವಾಸ ಗೌಡ
ನೇಗಿಲು ಹಿರಿಯ ವಿಭಾಗ
- ಪ್ರಥಮ: ಎಂಬತ್ತು ಬಡಗಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ (10.87) – ಓಡಿಸಿದವರು: ಕುಂದ ಬಾರಂದಡಿ ಮಾಸ್ತಿಕಟ್ಟೆ ಸ್ವರೂಪ್
- ದ್ವಿತೀಯ: ಮಂಗಳೂರು ಮರಕಡ ಬಾಯಾಡಿ ಮನೆ ಶಾಂತ ಸಂಜಯ್ ಶೆಟ್ಟಿ “ಎ” (11.44) – ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ
ನೇಗಿಲು ಕಿರಿಯ ವಿಭಾಗ
- ಪ್ರಥಮ: ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ “ಬಿ” (11.56) – ಓಡಿಸಿದವರು: ಕಾವೂರುದೋಟ ಸುದರ್ಶನ್
- ದ್ವಿತೀಯ: ಮುಲ್ಕಿ ಚಿತ್ರಾಪು ಸಾನದಮನೆ ಅಂಬಿಕಾ ರವೀಂದ್ರ ಪೂಜಾರಿ (11.74) – ಓಡಿಸಿದವರು: ಬಾರಾಡಿ ನತೀಶ್ ಸಫಲಿಗ
ಪರಂಪರೆಯ ಕ್ರೀಡೆಗೆ ಹೊಸ ಉತ್ಸಾಹ ತುಂಬಿದ ಈ ವರ್ಷದ ಮಂಗಳೂರು ಕಂಬಳ ಕೂಟವು ಅಪಾರ ಜನಸ್ತೋಮದ ನಡುವೆ ಯಶಸ್ವಿಯಾಗಿ ಸಂಪನ್ನವಾಯಿತು.







