ಸಿದ್ದಾಪುರ | ಕುಂದಾಪುರ
ಕುಂದಾಪುರ ತಾಲೂಕಿನ ಸಿದ್ದಾಪುರ ಸಮೀಪದ ಜನ್ಸಾಲೆ ಪ್ರದೇಶದಲ್ಲಿರುವ ತೆಂಗಿನ ಎಣ್ಣೆ ಮಿಲ್ ಒಂದರಲ್ಲಿ ತಡರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿ ಅಪಾರ ಆರ್ಥಿಕ ನಷ್ಟ ಉಂಟಾದ ಘಟನೆ ವರದಿಯಾಗಿದೆ.
ಶ್ರೀ ಮಧುಮಾಯ ಆಯಿಲ್ಸ್ (ಮಧು) ಫ್ಯಾಕ್ಟರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು. ಕುಂದಾಪುರ, ಬೈಂದೂರು ಹಾಗೂ ಹೊಸಂಗಡಿ ಕೆಪಿಟಿಸಿಎಲ್ನಿಂದ ತಲಾ ಒಂದೊಂದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡವು.
ತೆಂಗಿನೆಣ್ಣೆ ಸಂಗ್ರಹ ಹೆಚ್ಚಿದ್ದರಿಂದ ಬೆಂಕಿಯ ತೀವ್ರತೆ ಹೆಚ್ಚಾಗಿ ನಿಯಂತ್ರಣಕ್ಕೆ ತರಲು ಸಾಕಷ್ಟು ಸಮಯ ತೆಗೆದುಕೊಂಡಿತು. ಸ್ಥಳೀಯರ ಸಹಕಾರದೊಂದಿಗೆ ರಾತ್ರಿಯಿಂದ ಬೆಳಿಗ್ಗೆ ಸುಮಾರು 9 ಗಂಟೆಯವರೆಗೆ ನಿರಂತರವಾಗಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಯಿತು.
ಘಟನಾ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿ ಅವಘಡದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Trending
- ಮಂಗಳೂರು ರೈಲ್ವೆ ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಧನ್ಯವಾದ
- ಯುವ ನಶಾ ಮುಕ್ತ ಸಮಾಜ ನಿರ್ಮಾಣಕ್ಕೆ ಜಾಗೃತಿ ಕಾರ್ಯಕ್ರಮ ಸುರತ್ಕಲ್ನಲ್ಲಿ ಸೆ. 2ರಂದು ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮ
- ಬ್ರಹ್ಮಾವರ ಬೈಕಾಡಿಯಲ್ಲಿ ನೂತನ ತುಳು ಟೆಲಿ ಮೂವಿಗೆ ಮುಹೂರ್ತ ತುಳು ಭಾಷೆ, ಸಂಸ್ಕೃತಿ ಹಾಗೂ ಕರಾವಳಿಯ ಬದುಕಿನ ಅನಾವರಣಕ್ಕೆ ಹೊಸ ಪ್ರಯತ್ನ
- ಶಿವಪುರದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿದ ಶ್ರೀ ರಾಯರ 52ನೇ ಆರಾಧನಾ ಮಹೋತ್ಸವ
- ಪೋಕ್ಸೋ ಪ್ರಕರಣ: ಆರೋಪಿ ಬಂಧನಕ್ಕೆ ಆಗ್ರಹ ರಾಜಕೀಯ ಒತ್ತಡಕ್ಕೆ ಮಣಿಯದೆ ತನಿಖೆ ನಡೆಸಲಿ – ಹಕೀಂ ಕೂರ್ನಡ್ಕ
- ತುಳುವ ಮಹಾಸಭೆ ಇಂಟರ್ನ್ಯಾಷನಲ್ನ ಮಂಗಳೂರು ವಲಯ ಸಮಿತಿ ರೂಪೀಕರಣ ಸಭೆ ಸೆ.3ರಂದು
- ಮಂಗಳೂರು ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್ ವರ್ಗಾವಣೆ – ಆರ್. ಚೇತನ್ ನೂತನ ಡಿಐಜಿಯಾಗಿ ನೇಮಕ
- ಕಾನ್ಪುರ ತರಬೇತಿ ವಿಮಾನ ದುರಂತ – ಕರ್ನಾಟಕದ ಯುವ ಪೈಲಟ್ ಸಾವು

