ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಇಂದು ಮಹತ್ವದ ಸಹಕಾರ ಕಾರ್ಯಕ್ರಮ ನಡೆಯಿತು. ಬೋಳಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್ನ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ದಾಮೋದರ ಕಾಮತ್ ಅವರು ಸಂಸ್ಥೆಯ ಸಾಮಾಜಿಕ ಹೊಣೆಗಾರಿಕೆಯ ಭಾಗವಾಗಿ ಜೀಪಿನ ಕೀ ಯನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಹರಿರಾಮ್ ಶಂಕರ್, ಐಪಿಎಸ್ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಪೊಲೀಸ್ ಉಪಾಧೀಕ್ಷಕರಾದ ಶ್ರೀ ತಿಮ್ಮಪ್ಪ ಗೌಡ (ಡಿಎಆರ್, ಉಡುಪಿ), ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ನಿರೀಕ್ಷಕರಾದ ಶ್ರೀ ರವಿ ಕುಮಾರ್ ಹಾಗೂ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಶ್ರೀ ಪ್ರಸನ್ನ ಅವರು ಉಪಸ್ಥಿತರಿದ್ದರು.
ಪೊಲೀಸ್ ಇಲಾಖೆಯ ಕಾರ್ಯಕ್ಷಮತೆ ಮತ್ತು ಸಾರ್ವಜನಿಕ ಸೇವೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಖಾಸಗಿ ಸಂಸ್ಥೆಯೊಂದು ನೀಡಿದ ಈ ಸಹಕಾರವನ್ನು ಪೊಲೀಸ್ ವಲಯದಿಂದ ಅಭಿನಂದಿಸಲಾಯಿತು.






