ತುಮಕೂರು :
ಕಾನೂನು ಕಾಪಾಡಬೇಕಾದವರೇ ಲಂಚದ ಜಾಲಕ್ಕೆ ಸಿಲುಕಿರುವ ಘಟನೆ ತುಮಕೂರಿನಲ್ಲಿ ಬೆಳಕಿಗೆ ಬಂದಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಚೇತನ್ ಕುಮಾರ್ ಅವರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಪ್ರಕರಣವೊಂದರಲ್ಲಿ ವಶಪಡಿಸಿಕೊಂಡಿದ್ದ ಕಾರನ್ನು ಬಿಡುಗಡೆ ಮಾಡುವುದಾಗಿ ಹೇಳಿ, ಪಿಎಸ್ಐ ಚೇತನ್ ಕುಮಾರ್ ಅವರು ಒಟ್ಟು 1 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಇದರ ಮೊದಲ ಹಂತವಾಗಿ 40 ಸಾವಿರ ರೂ. ಲಂಚ ಪಡೆಯುವ ವೇಳೆ, ಲೋಕಾಯುಕ್ತ ಅಧಿಕಾರಿಗಳು ಪೊಲೀಸ್ ಠಾಣೆಯಲ್ಲೇ ದಾಳಿ ನಡೆಸಿ ಅವರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ಲಂಚ ಸ್ವೀಕರಿಸುತ್ತಿದ್ದ ಕ್ಷಣದಲ್ಲೇ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ತಂಡ, ಪಿಎಸ್ಐ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆಯ ಕುರಿತು ವಿಸ್ತೃತ ತನಿಖೆ ಮುಂದುವರಿದಿದೆ.
➡️ ಲಂಚಮುಕ್ತ ಆಡಳಿತದ ಮಾತುಗಳ ನಡುವೆಯೇ, ಪೊಲೀಸ್ ಇಲಾಖೆಯೊಳಗಿನ ಭ್ರಷ್ಟಾಚಾರ ಮತ್ತೊಮ್ಮೆ ಬಹಿರಂಗವಾಗಿದೆ.




