ಮಂಗಳೂರು: Mangaluru ನಗರ ಪೊಲೀಸ್ ಕಮಿಷನರೇಟ್ ಹಾಗೂ Udupi ಜಿಲ್ಲೆ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ಹಲವು ಗಂಭೀರ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಅನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತನನ್ನು ಹಳೆಯಂಗಡಿ ವಿಲೇಜ್ ನಿವಾಸಿ ಸಜ್ವಾನ್ ಹುಸೈನ್ (42) ಎಂದು ಗುರುತಿಸಲಾಗಿದೆ. ಈತನ ವಿರುದ್ಧ 02 ಕೊಲೆ, 04 ಕೊಲೆಯತ್ನ, ಗ್ಯಾಂಗ್ ರೇಪ್, 05 ದರೋಡೆ, ಅಪಹರಣ, ಸುಲಿಗೆ, ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ, ಕಳ್ಳತನ, ಸರಗಳ್ಳತನ, ಜೈಲಿನಲ್ಲಿಯೇ ಸಹಖೈದಿಗಳ ಮೇಲೆ ಹಲ್ಲೆ, ಅಕ್ರಮ ಕೂಟ ಸೇರಿ ಹಲ್ಲೆ, ಕೊಲೆ ಬೆದರಿಕೆ, ಕರ್ತವ್ಯಕ್ಕೆ ಅಡ್ಡಿ, ದರೋಡೆಗೆ ತಯಾರಿ ಹಾಗೂ ಸಂಚು ಸೇರಿದಂತೆ ವಿವಿಧ ಗಂಭೀರ ಅಪರಾಧಗಳಿಗೆ ಸಂಬಂಧಿಸಿದಂತೆ ಒಟ್ಟು ಸುಮಾರು 21 ಪ್ರಕರಣಗಳು ದಾಖಲಾಗಿವೆ.
ಈತನ ವಿರುದ್ಧ Mulkhi Police Station ವ್ಯಾಪ್ತಿಯಲ್ಲಿ 2008ರಲ್ಲಿ ದಾಖಲಾಗಿದ್ದ ಪ್ರವೀಣ್ ಎಂಬವರ ಅಪಹರಣ, ದರೋಡೆ ಹಾಗೂ ಕೊಲೆ ಪ್ರಕರಣದಲ್ಲಿ ಮಾನ್ಯ Karnataka High Court ದಿನಾಂಕ 28-02-2020ರಂದು ಜೀವಾವಧಿ ಶಿಕ್ಷೆ ವಿಧಿಸಿದೆ. ಅದಲ್ಲದೆ Karkala Police Station ವ್ಯಾಪ್ತಿಯಲ್ಲಿ 2008ರಲ್ಲಿ ದಾಖಲಾಗಿದ್ದ ದರೋಡೆ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯವು 3 ವರ್ಷಗಳ ಶಿಕ್ಷೆ ವಿಧಿಸಿದೆ.
ಬಂಧಿತನ ವಿರುದ್ಧ ಇನ್ನೂ 13 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದ್ದು, ವಿವಿಧ ನ್ಯಾಯಾಲಯಗಳಿಂದ ದಸ್ತಗಿರಿ ವಾರೆಂಟ್ಗಳು ಜಾರಿಗೊಂಡಿವೆ. ಅಲ್ಲದೆ 05 ಪ್ರಕರಣಗಳಲ್ಲಿ ನ್ಯಾಯಾಲಯವು ಎಲ್.ಪಿ.ಸಿ (Long Pending Case) ಎಂದು ಘೋಷಿಸಿರುವುದು ತಿಳಿದುಬಂದಿದೆ.
ಸುದೀರ್ಘ ಅವಧಿಯಿಂದ ಕಾನೂನು ಚೌಕಟ್ಟಿನಿಂದ ತಪ್ಪಿಸಿಕೊಳ್ಳುತ್ತಿದ್ದ ಆರೋಪಿ ಮೇಲೆ ವಿಶೇಷ ನಿಗಾವಹಿಸಿ ಸೂಕ್ತ ಮಾಹಿತಿ ಸಂಗ್ರಹಿಸಿದ ಪೊಲೀಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯಕ್ಷಮತೆಯನ್ನು ಹಿರಿಯ ಅಧಿಕಾರಿಗಳು ಶ್ಲಾಘಿಸಿದ್ದಾರೆ.
Trending
- ತುಳು ಭಾಷಾ ಕಲಿಕಾ ಪುಸ್ತಕ ಬಿಡುಗಡೆ
- ಉಡುಪಿ ಜಿಲ್ಲೆಯಲ್ಲಿ ಉದ್ಯಮಿಗಳಿಗೆ ಬೆದರಿಕೆ ಕರೆ! ಹೆಮಂತ್ ಪೂಜಾರಿ ಹೆಸರಿನಲ್ಲಿ ₹5 ಕೋಟಿ ಸುಲಿಗೆಗೆ ಬೇಡಿಕೆ
- ಎಲ್ಲರ ಪ್ರೀತಿ, ಆಶೀರ್ವಾದದಿಂದ ಮತ್ತೆ ನಿಮ್ಮೊಂದಿಗೆ ಬೆರೆಯುವಂತಾಗಿದೆ: ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್
- ವೈದ್ಯರ ಕ್ಲಿನಿಕ್ಗೆ ಬೆಂಕಿ ಹಚ್ಚಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮಕ್ಕೆ ಯೋಗಿಶ್ ಶೆಟ್ಟಿ ಜಪ್ಪು ಆಗ್ರಹ
- ಗ್ರಾಹಕರ ಹಕ್ಕುಗಳ ರಕ್ಷಣೆಗೆ ರಾಜ್ಯ ಸರ್ಕಾರ ವಿಶೇಷ ಆದ್ಯತೆ ನೀಡಲಿ: ಯೋಗಿಶ್ ಶೆಟ್ಟಿ ಜಪ್ಪು ಆಗ್ರಹ ಹಾಲ್ಮಾರ್ಕಿಂಗ್, ಗುಣಮಟ್ಟದ ಉತ್ಪನ್ನಗಳ ಮಾರಾಟ ಮತ್ತು ಗ್ರಾಹಕ ಜಾಗೃತಿಗೆ ಒಂಬತ್ತು ಪ್ರಮುಖ ಬೇಡಿಕೆಗಳೊಂದಿಗೆ ಮುಖ್ಯಮಂತ್ರಿಗಳಿಗೆ ಮನವಿ
- ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಡಾ. ಸುಧಾ ಯಾದವ್ ನೇಮಕ ಮಾಜಿ ಸಂಸದೆ, ಶಿಕ್ಷಣ ತಜ್ಞೆ ಡಾ. ಸುಧಾ ಯಾದವ್ಗೆ ಮಹತ್ವದ ಜವಾಬ್ದಾರಿ; ಕರ್ನಾಟಕದ ಎರಡನೇ ಮಹಿಳಾ ರಾಜ್ಯಪಾಲೆ
- ನಮ್ಮ ಕರ್ನಾಟಕ ಸೇನೆಯ ಸುಜಯ್ ಪೂಜಾರಿ ಅವರಿಗೆ ನಾಲ್ಕು ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿ
- ತುಳುನಾಡ ರಕ್ಷಣಾ ವೇದಿಕೆಯ ದುಬೈ ಘಟಕದ ಅಧ್ಯಕ್ಷ, ತುಳು ಕಲಾವಿದ ಅಶೋಕ್ ಬೈಲೂರು ಅವರಿಗೆ ಸನ್ಮಾನ ತುಳು ಭಾಷೆ, ಕಲೆ ಮತ್ತು ಸಂಸ್ಕೃತಿಯ ಉಳಿವಿನಲ್ಲಿ ಕಲಾವಿದರ ಪಾತ್ರ ಮಹತ್ವದ್ದು – ಫ್ರ್ಯಾಂಕಿ ಡಿಸೋಜ ಕೊಳಲಗಿರಿ

