ಚಿಕ್ಕಮಂಗಳೂರು: ಇತ್ತೀಚೆಗೆ ಮರು ಸೇರ್ಪಡೆಗೊಂಡ ಕರಾವಳಿ ಭಾಗದ ಜೆಡಿಎಸ್ ಮುಖಂಡರಾದ ಶಶಿರಾಜ್ ಶೆಟ್ಟಿ ಕೊಳಂಬೆ ಹಾಗೂ ಯೋಗಿಶ್ ಶೆಟ್ಟಿ ಜಪ್ಪು ಅವರು ಚಿಕ್ಕಮಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದು ಪಕ್ಷದ ಸಂಘಟನೆ ಬಲವರ್ಧನೆ, ಸಂಘಟನೆ ವಿಸ್ತರಣೆ ಹಾಗೂ ಮುಂದಿನ ರಾಜಕೀಯ ಕಾರ್ಯಚಟುವಟಿಕೆಗಳ ಕುರಿತು ಮಹತ್ವದ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಕರಾವಳಿ ಭಾಗದಲ್ಲಿ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು, ಹೊಸ ಕಾರ್ಯಕರ್ತರನ್ನು ಸಂಘಟನೆಯಲ್ಲಿ ಸೇರಿಸುವುದು ಹಾಗೂ ಪಕ್ಷದ ಚಟುವಟಿಕೆಗಳನ್ನು ತಳಮಟ್ಟದಿಂದ ಗಟ್ಟಿಗೊಳಿಸುವ ಬಗ್ಗೆ ಸಮಾಲೋಚನೆ ನಡೆಯಿತು.
ಭೇಟಿ ವೇಳೆ ಪರಸ್ಪರ ಸ್ನೇಹಪೂರ್ಣವಾಗಿ ವಿಚಾರ ವಿನಿಮಯ ಮಾಡಿಕೊಂಡ ನಾಯಕರು, ಹಿರಿಯ ನಾಯಕರಾದ ಎಸ್.ಎಲ್. ಭೋಜೇಗೌಡ ಅವರ ಮಾರ್ಗದರ್ಶನದಲ್ಲಿ ಪಕ್ಷದ ಸಂಘಟನೆ ಬಲಪಡಿಸಲು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಸಂಕಲ್ಪವನ್ನು ವ್ಯಕ್ತಪಡಿಸಿದರು.
ಮುಂದಿನ ದಿನಗಳಲ್ಲಿ ದಕ್ಷಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಸಕ್ರಿಯವಾಗಿ ಕೆಲಸ ಮಾಡುವವರನ್ನು ಸೇರಿಸಿಕೊಂಡು ಮುಂದಿನ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಪಕ್ಷವನ್ನು ತಯಾರಿ ಮಾಡುವ ಹಿನ್ನೆಲೆಯಲ್ಲಿ ಪಕ್ಷದ ಪ್ರತಿಯೊಬ್ಬರು ಸಮರ್ಪಿತ ಮನೊಭಾವನೆಯೊಂದಿಗೆ ಕೈಜೋಡಿಸಬೇಕಾಗಿದೆ ಎಂದು ಮನದಾಳದ ಮಾತನ್ನು ಹಿರಿಯ ನಾಯಕರಾದ ಶ್ರೀ ಭೋಜೆಗೌಡರಲ್ಲಿ ವ್ಯಕ್ತ ಪಡಿಸಿದ್ದರು.


