ಉಡುಪಿ: ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಉಡುಪಿ ಜಿಲ್ಲಾ ಘಟಕಕ್ಕೆ ರಿಕ್ಷಾ ಚಾಲಕರಾದ ಎಂಟು ಮಂದಿ ಸದಸ್ಯರು ಸೇರ್ಪಡೆಗೊಂಡರು. ಸೋಮವಾರ (ಮಾ.16) ಬೆಳಿಗ್ಗೆ 11 ಗಂಟೆಗೆ ಉಡುಪಿಯ ಮಥುರಾ ಛತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಸದಸ್ಯ ಸೇರ್ಪಡೆ ನಡೆಯಿತು.
ಕರವೇ ರಾಜ್ಯಾಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ಅವರ ಅನುಮತಿಯೊಂದಿಗೆ ನಡೆದ ಸದಸ್ಯತ್ವ ನೋಂದಣಿ ಕಾರ್ಯಕ್ರಮದಲ್ಲಿ ವಿಠ್ಠಲ್ ಶೆಟ್ಟಿ, ನಿತೇಶ್ ಶೆಟ್ಟಿ, ಪಾಂಡಪ್ಪ, ಸಂತೋಷ್, ಇಬ್ರಾಹಿಂ, ಸಿದ್ದ ರೂಢ್, ಎಲ್ಲಪ್ಪ ಹಾಗೂ ಪ್ರವೀಣ್ ಅವರು ಸಂಘಟನೆಗೆ ಅಧಿಕೃತವಾಗಿ ಸೇರ್ಪಡೆಗೊಂಡರು.
ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಅವರು ಹೊಸ ಸದಸ್ಯರಿಗೆ ಶಾಲು ಹೊದಿಸಿ ಆತ್ಮೀಯವಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸಲು ಎಲ್ಲರೂ ಒಗ್ಗೂಡಿ ಕಾರ್ಯನಿರ್ವಹಿಸಬೇಕು ಎಂದು ರಿಕ್ಷಾ ಚಾಲಕರಿಗೆ ಕರೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಕರವೇ ಜಿಲ್ಲಾ ಮುಖಂಡರಾದ ಜಯಪ್ರಕಾಶ್ ಶೆಟ್ಟಿ, ಆನಂದ್ ಶೆಟ್ಟಿ ಹಾಗೂ ನಾಗರಾಜ್ ಉಪಸ್ಥಿತರಿದ್ದರು.

