ಮಂಗಳೂರು: ನಗರದ ಬಂಟ್ಸ್ ಹಾಸ್ಟೆಲ್ ಅಮೃತೋತ್ಸವ ಕಟ್ಟಡ ಸಭಾಂಗಣದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ದತ್ತು ಸ್ವೀಕರಿಸಿ ಮಾಸಿಕ ಧನಸಹಾಯ ಪಡೆಯುತ್ತಿರುವ ಪಲಾನುಭವಿಗಳಿಗೆ ಸಹಾಯಧನದ ಚೆಕ್ ವಿತರಣಾ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ವಹಿಸಿ, ಸಮಾಜ ಸೇವಾ ಕಾರ್ಯಗಳ ಮೂಲಕ ಬಡವರ ಮತ್ತು ಅಗತ್ಯವಿರುವವರ ಜೀವನಕ್ಕೆ ನೆರವಾಗುವುದು ಒಕ್ಕೂಟದ ಪ್ರಮುಖ ಉದ್ದೇಶವೆಂದು ಹೇಳಿದರು. ಸಮಾಜದ ಸಹಕಾರದಿಂದ ಇಂತಹ ಯೋಜನೆಗಳನ್ನು ಇನ್ನಷ್ಟು ವಿಸ್ತರಿಸಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕಾರ್ಯದರ್ಶಿ ಜಯಕರ್ ಶೆಟ್ಟಿ ಇಂದ್ರಾಳಿ ಹಾಗೂ ಜೊತೆ ಕಾರ್ಯದರ್ಶಿ ಚಂದ್ರಹಾಸ್ ಡಿ. ಶೆಟ್ಟಿ ರಂಗೋಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಒಕ್ಕೂಟದ ಸಂಚಾಲಕರಾದ ಕೊಲ್ಲಾಡಿ ಬಾಲಕೃಷ್ಣ ರೈ, ಆಹ್ವಾನಿತ ಸದಸ್ಯರಾದ ರವಿರಾಜ್ ಶೆಟ್ಟಿ ಜತ್ತಬೆಟ್ಟು, ಪಲಾನುಭವಿಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ನಂತರ ಪಲಾನುಭವಿಗಳಿಗೆ ಸಹಾಯಧನದ ಚೆಕ್ಗಳನ್ನು ವಿತರಿಸಲಾಯಿತು.



