ಮಂಗಳೂರು, ದಿನಾಂಕ : 19-03-2026 ನೂತನವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿದ್ಯಾರ್ಥಿ ಜನತಾದಳದ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವ ನಿಹಾಲ್ ಎಸ್ ಕೋಡ್ತುಗುಳಿ ಅವರು, ತಮ್ಮ ಪದಗ್ರಹಣದ ಬಳಿಕ ಜಿಲ್ಲೆಯ ಹಿರಿಯ ರಾಜಕೀಯ ನಾಯಕರು ಹಾಗೂ ಗಣ್ಯರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.



ಈ ಸಂದರ್ಭದಲ್ಲಿ ಅವರು ಸಂಘಟನೆಯ ಬಲವರ್ಧನೆ, ವಿದ್ಯಾರ್ಥಿ ಸಮುದಾಯದ ಸಮಸ್ಯೆಗಳ ಪರಿಹಾರ ಹಾಗೂ ಸಂಘಟನೆಯನ್ನು ಇನ್ನಷ್ಟು ಸಕ್ರಿಯಗೊಳಿಸುವ ಬಗ್ಗೆ ಚರ್ಚಿಸಿದರು. ಹಿರಿಯ ನಾಯಕರು ನಿಹಾಲ್ ಅವರಿಗೆ ಶುಭಾಶಯಗಳನ್ನು ತಿಳಿಸಿ, ಸಂಘಟನೆಯನ್ನು ಶಕ್ತಿಯುತವಾಗಿ ಮುನ್ನಡೆಸುವಂತೆ ಸಲಹೆ ನೀಡಿದರು.

ನಿಹಾಲ್ ಎಸ್ ಕೋಡ್ತುಗುಳಿ ಅವರು ಮಾತನಾಡಿ, ವಿದ್ಯಾರ್ಥಿ ಜನತಾದಳವನ್ನು ಇನ್ನಷ್ಟು ಬಲಪಡಿಸಿ, ವಿದ್ಯಾರ್ಥಿಗಳ ಹಿತಾಸಕ್ತಿಗಾಗಿ ಕಾರ್ಯನಿರ್ವಹಿಸುವುದಾಗಿ ಹೇಳಿದರು. ಜಿಲ್ಲೆಯಾದ್ಯಂತ ಸಂಘಟನೆಯನ್ನು ವಿಸ್ತರಿಸಿ, ಯುವಜನರಲ್ಲಿ ಜಾಗೃತಿ ಮೂಡಿಸುವತ್ತ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.
ಈ ಭೇಟಿ ಕಾರ್ಯಕ್ರಮದಲ್ಲಿ ಸಂಘಟನೆಯ ಪ್ರಮುಖ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

