ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಕೆ.ಸಿ.ರೋಡ್ ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ, ಮಂಗಳೂರು ಇವರ ನುರಿತ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ ಹಾಗೂ ಕಣ್ಣಿನ ತಪಾಸಣಾ ಶಿಬಿರವು ಉಚ್ಚಿಲ್ಸ್ ಕಾಂಪ್ಲೆಕ್ಸ್, ಸುಜಾತ ಜುವೆಲ್ಲರಿ ಹತ್ತಿರ, ಕೆ.ಸಿ.ರೋಡ್ (ಶಾಖೆಯ ಆವರಣ)ದಲ್ಲಿ ನಡೆಯಿತು.
ಈ ಶಿಬಿರವನ್ನು ಶ್ರೀ ಕೃಷ್ಣ ಭಜನಾ ಮಂದಿರ (ರಿ.) ಕೆ.ಸಿ.ರೋಡ್, ಕೃಷ್ಣನಗರ, ತಲಪಾಡಿ ಇದರ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ರವರು ಉದ್ಘಾಟಿಸಿ ಮಾತನಾಡಿ, “ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸದಾ ಆರೋಗ್ಯ ಶಿಬಿರವನ್ನು ಆಯೋಜಿಸುತ್ತಿರುವುದು ಶ್ಲಾಘನೀಯ” ಎಂದು ಹೇಳಿದರು.
ಕೆ.ಎಂ.ಸಿ ಆಸ್ಪತ್ರೆಯ ವೈದ್ಯಾಧಿಕಾರಿಯಾದ ಡಾ| ಉತ್ತರ್ಷ್ ರವರು ಮಾತನಾಡಿ, “ಆರೋಗ್ಯ ಸಮಸ್ಯೆ ಯಾವ ರೀತಿ ಬರುತ್ತದೆ, ಅದರ ಮುಂಜಾಗ್ರತೆಯನ್ನು ಯಾವ ರೀತಿ ಮಾಡಬೇಕು ಹಾಗೂ ಉಚಿತ ವೈದ್ಯಕೀಯ ಶಿಬಿರದ ಉಪಯೋಗದ ಬಗ್ಗೆ ಮಾಹಿತಿ ನೀಡಿದರು.”
ಕೆ.ಸಿ.ರೋಡ್ನ ಉಚ್ಚಿಲ್ಸ್ ಕಾಂಪ್ಲೆಕ್ಸ್ನ ಮಾಲಕರಾದ ಶ್ರೀ ಅಬ್ಬಾಸ್ ಉಚ್ಚಿಲ್ ರವರು ಮಾತನಾಡಿ, “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಮುಂದಾಳತ್ವದಲ್ಲಿ ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ಸಾಮಾಜಿಕ ಕಳಕಳಿಯೊಂದಿಗೆ ಸದಾ ಆರೋಗ್ಯ ಶಿಬಿರವನ್ನು ಆಯೋಜಿಸಿ ಜನ ಸಾಮಾನ್ಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿರುವುದು ಶ್ಲಾಘನೀಯ” ಎಂದು ಹೇಳಿದರು.
ಕೆ.ಎಂ.ಸಿ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿಯಾದ ಶ್ರೀ ಹರ್ಬಟ್ ಪಿರೇರಾ ರವರು ಮಾತನಾಡಿ, “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಹಯೋಗದೊಂದಿಗೆ ಕೆ.ಎಂ.ಸಿ ಆಸ್ಪತ್ರೆಯು ಹಲವಾರು ಉಚಿತ ಶಿಬಿರಗಳನ್ನು ಆಯೋಜಿಸುತ್ತಾ ಬರುತ್ತಿದೆ. ಈ ಶಿಬಿರದಲ್ಲಿ ಉಚಿತ ಕಣ್ಣಿನ ತಪಾಸಣೆ, ಅಗತ್ಯವಿರುವವರಿಗೆ ಕಣ್ಣಿನ ಶಸ್ತ್ರಚಿಕಿತ್ಸೆ, ಬಿಪಿ ಮತ್ತು ಮಧುಮೇಹ ತಪಾಸಣೆ, ಎಲುಬು, ಕೀಲು, ಕಿವಿ, ಮೂಗು, ಗಂಟಲು ತಪಾಸಣೆ, ಸಾಮಾನ್ಯ ವೈದ್ಯಕೀಯ ಸಲಹೆ, ಉಚಿತ ಔಷಧ ವಿತರಣೆ ನೀಡಲಾಗುತ್ತದೆ” ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ. ರವರು ಮಾತನಾಡಿ, “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತಿವರ್ಷ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬಂದಿದೆ. ಇದು ಸಂಘದ 107ನೇ ಉಚಿತ ವೈದ್ಯಕೀಯ ಶಿಬಿರವಾಗಿದೆ. ರೋಗ ಬರುವುದಕ್ಕಿಂತ ಮುಂಚಿತವಾಗಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಉತ್ತಮ. ಇಂತಹ ಉಚಿತ ಆರೋಗ್ಯ ಶಿಬಿರಗಳಲ್ಲಿ ತಪಾಸಣೆ ಮಾಡಿಸಿಕೊಳ್ಳುವುದರಿಂದ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬಹುದು. ಈ ಶಿಬಿರವು ಕೆ.ಸಿ.ರೋಡ್ ಪರಿಸರದ ಜನರಿಗೆ ತುಂಬಾ ಪ್ರಯೋಜನಕಾರಿಯಾಗಿದೆ” ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀ ಆನಂದ ಎಸ್. ಕೊಂಡಾಣ, ಶ್ರೀ ಗೋಪಾಲ್ ಎಂ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಶ್ರೀ ಕೃಷ್ಣ ಭಜನಾ ಮಂದಿರ (ರಿ.) ಕೆ.ಸಿ.ರೋಡ್, ಕೃಷ್ಣನಗರ-ತಲಪಾಡಿ ಇದರ ಗೌರವಾಧ್ಯಕ್ಷರಾದ ಶ್ರೀ ಜಗನ್ನಾಥ್, ಕಾರ್ಯದರ್ಶಿ ಕಾರ್ತಿಕ್ ಮತ್ತು ಇತರರು ಉಪಸ್ಥಿತರಿದ್ದರು.
ಈ ಶಿಬಿರವನ್ನು ಎನ್.ಜಿ. ವರ್ಲ್ಡ್ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು, ಶ್ರೀ ಕೃಷ್ಣ ಭಜನಾ ಮಂದಿರ (ರಿ.) ಕೆ.ಸಿ.ರೋಡ್, ಕೃಷ್ಣನಗರ, ತಲಪಾಡಿ ಹಾಗೂ ಶ್ರೀ ಲಕ್ಷ್ಮೀ ಶಾಮಿಯಾನ, ಪಣಿರ್-ಬಾಳಿಕೆ, ಕೋಟೆಕಾರ್ ಇವರ ಜಂಟಿ ಸಹಯೋಗದೊಂದಿಗೆ ಆಯೋಜಿಸಲಾಗಿತ್ತು. ಈ ಶಿಬಿರದ ಪ್ರಯೋಜನವನ್ನು ಸುಮಾರು 150ಕ್ಕೂ ಹೆಚ್ಚು ಶಿಬಿರಾರ್ಥಿಗಳು ಪಡೆದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬೆಂದೂರುವೆಲ್ ಶಾಖೆಯ ಹಿರಿಯ ಶಾಖಾಧಿಕಾರಿ ಶ್ರೀಮತಿ ಸೌಮ್ಯಲತಾ ರವರು ಸ್ವಾಗತಿಸಿ, ಕೆ.ಸಿ.ರೋಡ್ ಶಾಖೆಯ ಶಾಖಾಧಿಕಾರಿ ಶ್ರೀ ಶಿವರಾಮ್ ರವರು ವಂದಿಸಿದರು. ಸಂಘದ ಉಳ್ಳಾಳ ಶಾಖೆಯ ಹಿರಿಯ ಶಾಖಾಧಿಕಾರಿ ಶ್ರೀ ಸಚಿನ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.
Trending
- ಮೂಲ್ಕಿಯಲ್ಲಿ ಬ್ಯಾರಿ ಸಾಹಿತ್ಯ ಪರಿಷತ್ ತಾಲೂಕು ಘಟಕಕ್ಕೆ ಚಾಲನೆ: ಸದಸ್ಯತ್ವ ಅಭಿಯಾನ, ಸಮಿತಿ ರಚನೆ ಹಾಗೂ ಸಾಧಕರಿಗೆ ಸನ್ಮಾನ
- ಬಿಕರ್ಣಕಟ್ಟೆ–ಬಜ್ಜೋಡಿ ಗುಡ್ಡ ಕುಸಿತದ ಆತಂಕದ ಪ್ರದೇಶಕ್ಕೆ ಜೆಡಿಎಸ್ ಮುಖಂಡರ ಭೇಟಿ,ನಾಗೋರಿ ದುರಂತ ಮರುಕಳಿಸದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ; ಜೀವಹಾನಿಗೂ ಮುನ್ನ ಸರ್ಕಾರ ಎಚ್ಚೆತ್ತುಕೊಳ್ಳಲಿ – ಜೆಡಿಎಸ್ ಆಗ್ರಹ
- ಮಲ್ಲಾರು–ಮಜೂರು ಬದ್ರಿಯಾ ಜುಮುಅ ಮಸೀದಿ ಆಡಳಿತ ಸಮಿತಿಗೆ ಗೌರವಾಭಿನಂದನೆ
- ವೃಕ್ಷ ಸಂತ್ರಸ್ತರಿಗೆ ತ್ವರಿತ ನ್ಯಾಯ, ಕೊಳಂಬೆ ಜಲಾವೃತ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಅಪರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ತುಳುನಾಡ ರಕ್ಷಣಾ ವೇದಿಕೆ ಮನವಿ
- ಸಕ್ರಿಯ ರಾಜಕಾರಣಕ್ಕೆ ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಅಸೈಗೋಳಿ ಮರಳಿಕೆ; ಜೆಡಿಎಸ್ಗೆ ಮತ್ತಷ್ಟು ಬಲ
- ಹೊಂಡಕ್ಕೆ ಬಿದ್ದು ಪ್ರಾಣಾಪಾಯದಲ್ಲಿದ್ದ ಗೋವಿನ ರಕ್ಷಣೆ ಮಾಡಿದ ಬಾಲಕರು
- ಪತ್ರಿಕಾ ದಿನಾಚರಣೆ: ನೈಜ ಸುದ್ದಿಗಳೇ ಆರೋಗ್ಯಕರ ಸಮಾಜದ ಅಡಿಪಾಯ – ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ
- ನಾಗೋರಿ ದುರಂತ ಸ್ಥಳಕ್ಕೆ ಜೆಡಿಎಸ್ ನಿಯೋಗ ಭೇಟಿ: ಮೃತರ ಕುಟುಂಬಕ್ಕೆ ನ್ಯಾಯಸಮ್ಮತ ಪರಿಹಾರ, ಅಪಾಯದ ಪ್ರದೇಶಗಳಿಗೆ ಶಾಶ್ವತ ಸುರಕ್ಷತಾ ಕ್ರಮ ಕೈಗೊಳ್ಳಲು ಒತ್ತಾಯ
