ಮಂಗಳೂರು : ಸೋಶಿಯಲ್ ಡೆಮಾಕ್ರಾಟ್ ಪಾರ್ಟಿ ಆಫ್ ಇಂಡಿಯಾ (SDPI) ಕೊಳಂಬೆ ಬ್ರಾಂಚ್ ವತಿಯಿಂದ 2025ನೇ ಸಾಲಿನ SSLC ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕಾರ್ಯಕ್ರಮ ಸಾಹಾದ್ ನಗರ ಕೊಳಂಬೆ ಆಟದ ಮೈದಾನದಲ್ಲಿ ಗೌರವಪೂರ್ವಕವಾಗಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಪಿಐ ಗುರುಪುರ ಬ್ಲಾಕ್ ಅಧ್ಯಕ್ಷರಾದ ಶರೀಫ್ ತೋಡಾರ್ ವಹಿಸಿದ್ದರು. ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದು ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ತಿಳಿಸಿದರು. ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಎಸ್ಡಿಪಿಐ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾದ ರಿಯಾಝ್ ಅಡ್ಡೂರು ಮಾತನಾಡಿ, ಇಂದಿನ ವಿದ್ಯಾರ್ಥಿಗಳು ಶ್ರಮ, ಶಿಸ್ತು ಮತ್ತು ಗುರಿ ಸಾಧನೆಯ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಮುಖ ಸಾಧನವಾಗಿದ್ದು, ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಉತ್ತಮ ಕಾರ್ಯಗಳಿಗೆ ಬಳಸಿಕೊಳ್ಳಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಎಸ್ಡಿಪಿಐ ಜೋತೆ ಕಾರ್ಯದರ್ಶಿಯಾದ ಫಯಾಜ್ ಕಾಟಿಪಳ್ಳ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳ ಸಾಧನೆಯನ್ನು ಗೌರವಿಸುವ ಉದ್ದೇಶದಿಂದ ಈ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿಯೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವಂತಹ ಸಾಮಾಜಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಕಾರ್ಯಕ್ರಮದಲ್ಲಿ SSLC ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಪೋಷಕರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದ ಸಂಚಾಲಕರಾಗಿ ಬಾದರ್ ನಾವೂರು ಹಾಗೂ ಮುಸ್ತಫ ಕೊಳಂಬೆ ಕಾರ್ಯನಿರ್ವಹಿಸಿದರು. ಸ್ಥಳೀಯ ಮುಖಂಡರು, ಕಾರ್ಯಕರ್ತರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

