ಮಂಗಳೂರು : ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಒಡ್ಡೂರು ಪಾರ್ಮ್ಸ್ನಲ್ಲಿ ಆಯೋಜಿಸಲಾಗಿದ್ದ ಎರಡು ದಿನಗಳ “ಪಂ. ದೀನ್ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ–2026” ವರ್ಗ ಯಶಸ್ವಿಯಾಗಿ ಸಮಾಪ್ತಿಗೊಂಡಿತು.
ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಂಸದ Nalin Kumar Kateel, ಬಿಜೆಪಿ ಜಗತ್ತಿನ ಅತಿದೊಡ್ಡ ರಾಜಕೀಯ ಪಕ್ಷವಾಗಿ ಬೆಳೆದು ನಿಲ್ಲಲು ನಿರಂತರ ಸಂಘಟನಾ ಚಟುವಟಿಕೆಗಳೇ ಪ್ರಮುಖ ಕಾರಣವಾಗಿವೆ ಎಂದು ಹೇಳಿದರು.

“ಅಭ್ಯಾಸ ವರ್ಗ, ಕಾರ್ಯಕಾರಿಣಿ ಸಭೆಗಳು, ಪದಾಧಿಕಾರಿಗಳ ಸಭೆಗಳು ಹಾಗೂ ಪ್ರಶಿಕ್ಷಣ ಕಾರ್ಯಕ್ರಮಗಳು ಕಾರ್ಯಕರ್ತರಲ್ಲಿ ಸಂಘಟನಾ ಶಕ್ತಿ ಮತ್ತು ರಾಷ್ಟ್ರಭಕ್ತಿ ಬೆಳೆಸುತ್ತವೆ. ವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷಕ್ಕಿಂತ ದೇಶ ಮುಖ್ಯ ಎಂಬ ತತ್ವದ ಆಧಾರದ ಮೇಲೆ ಬಿಜೆಪಿ ಕಾರ್ಯನಿರ್ವಹಿಸುತ್ತಿದ್ದು, ಪ್ರತಿಯೊಬ್ಬ ಕಾರ್ಯಕರ್ತನಿಗೂ ಜವಾಬ್ದಾರಿ ನೀಡಿ ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ತೊಡಗಿಸುತ್ತದೆ” ಎಂದು ಅವರು ಅಭಿಪ್ರಾಯಪಟ್ಟರು.
ಭಾರತವನ್ನು ಪರಮ ವೈಭವದತ್ತ ಕೊಂಡೊಯ್ಯುವ ಗುರಿ ಪ್ರತಿಯೊಬ್ಬ ಕಾರ್ಯಕರ್ತನದಾಗಿರಬೇಕು. ಸಂಘಟಿತ ಶಕ್ತಿಯೊಂದಿಗೆ ದೇಶ ಸೇವೆಯ ದಾರಿಯಲ್ಲಿ ಮುಂದುವರಿಯಬೇಕೆಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಸಕರಾದ D. Vedavyas Kamath, Rajesh Naik, Kishore Kumar Puttur, ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಟು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ ಹಾಗೂ ಲಲ್ಲೇಶ್ ಕುಮಾರ್ ಸೇರಿದಂತೆ ಜಿಲ್ಲಾ ಮತ್ತು ಮಂಡಲದ ವಿವಿಧ ಪದಾಧಿಕಾರಿಗಳು, ಮೋರ್ಚಾ ಹಾಗೂ ಪ್ರಕೋಷ್ಠ ಪ್ರಮುಖರು, ಮಹಾಶಕ್ತಿ ಕೇಂದ್ರ, ಶಕ್ತಿಕೇಂದ್ರ ಮತ್ತು ಬೂತ್ ಮಟ್ಟದ ಕಾರ್ಯಕರ್ತರು ಉಪಸ್ಥಿತರಿದ್ದರು.

