ಉಡುಪಿ : ಜನತಾದಳ (ಜಾತ್ಯತೀತ) ಪಕ್ಷದ ಉಡುಪಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾಗಿ ಜಯ ಪೂಜಾರಿ ಲಕ್ಷ್ಮೀನಗರ ಅವರನ್ನು ನೇಮಕ ಮಾಡಲಾಗಿದೆ. ಪಕ್ಷದ ಉಡುಪಿ ಜಿಲ್ಲಾಧ್ಯಕ್ಷ ಯೋಗಿಶ್ ವಿ. ಶೆಟ್ಟಿ ಅವರು ನೇಮಕಾತಿ ಆದೇಶ ಪತ್ರವನ್ನು ನೀಡಿ, ಈ ನೇಮಕ ತಕ್ಷಣದಿಂದಲೇ ಜಾರಿಗೆ ಬರುತ್ತದೆ ಎಂದು ತಿಳಿಸಿದ್ದಾರೆ.
ಜಯ ಪೂಜಾರಿ ಲಕ್ಷ್ಮೀನಗರ ಅವರು ಹಲವು ಸಾಮಾಜಿಕ ಹಾಗೂ ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದು, ಪಕ್ಷ ಸಂಘಟನೆಗೆ ಅವರ ಕೊಡುಗೆಯನ್ನು ಪರಿಗಣಿಸಿ ಈ ಮಹತ್ವದ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ಯೋಗಿಶ್ ವಿ. ಶೆಟ್ಟಿ ಹೇಳಿದ್ದಾರೆ.
ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಿ, ಕಾರ್ಯಕರ್ತರನ್ನು ಒಗ್ಗೂಡಿಸಿ ಸಂಘಟನಾತ್ಮಕ ಚಟುವಟಿಕೆಗಳನ್ನು ಚುರುಕುಗೊಳಿಸುವ ಜವಾಬ್ದಾರಿ ಜಯ ಪೂಜಾರಿ ಅವರ ಮೇಲಿದೆ ಎಂದು ಅವರು ತಿಳಿಸಿದ್ದಾರೆ.
ಈ ನೇಮಕಾತಿಯಿಂದ ಕ್ಷೇತ್ರದಲ್ಲಿ ಪಕ್ಷಕ್ಕೆ ಹೊಸ ಚೈತನ್ಯ ದೊರೆಯಲಿದ್ದು, ಮುಂದಿನ ದಿನಗಳಲ್ಲಿ ಜೆಡಿಎಸ್ ಸಂಘಟನೆ ಇನ್ನಷ್ಟು ಬಲಗೊಳ್ಳಲಿದೆ ಎಂಬ ವಿಶ್ವಾಸವನ್ನು ನಾಯಕರು ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು ಹಾಗೂ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ ಮತ್ತಿತ್ತರರು ಉಪಸ್ಥಿತರಿದ್ದರು.

