ಮಂಗಳೂರು : ಜನತಾದಳ (ಜಾತ್ಯತೀತ) ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಮತ್ತೋರ್ವ ಕಾರ್ಯಾಧ್ಯಕ್ಷರಾಗಿ ಶ್ರೀ ಇಕ್ಬಲ್ ಅಹಮದ್ ಮುಲ್ಕಿ ಅವರನ್ನು ನೇಮಕ ಮಾಡಲಾಗಿದೆ.
ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವರಾದ H. D. Kumaraswamy ಅವರು ಇಕ್ಬಲ್ ಅಹಮದ್ ಮುಲ್ಕಿ ಅವರಿಗೆ ಅಧಿಕೃತ ನೇಮಕಾತಿ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಶ್ರೀ ಶಶಿರಾಜ್ ಶೆಟ್ಟಿ ಕೊಳಂಬೆ ಹಾಗೂ ಶ್ರೀ ವಸಂತ್ ಪೂಜಾರಿ ಅವರು ಜಿಲ್ಲಾ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದು, ಇದೀಗ ಇಕ್ಬಲ್ ಅಹಮದ್ ಮುಲ್ಕಿ ಅವರ ಸೇರ್ಪಡೆಯಿಂದ ಜಿಲ್ಲಾ ಜೆಡಿಎಸ್ ಸಂಘಟನೆಗೆ ಮತ್ತಷ್ಟು ಬಲ ದೊರೆತಿದೆ.
ಇವರ ನೇಮಕಾತಿಯನ್ನು ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸ್ವಾಗತಿಸಿ ಅಭಿನಂದನೆ ಸಲ್ಲಿಸಿದ್ದಾರೆ.

