ಮಂಗಳೂರು : ಜನತಾದಳ (ಜಾತ್ಯತೀತ) ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಪಕ್ಷದ ಸಂಘಟನೆ ಬಲವರ್ಧನೆ, ಮುಂದಿನ ಕಾರ್ಯಕ್ರಮಗಳ ರೂಪರೇಖೆ ಹಾಗೂ ಮುಂಬರುವ ಚುನಾವಣೆಯ ತಂತ್ರಗಾರಿಕೆ ಕುರಿತು ಚರ್ಚಿಸಲು ಮಹತ್ವದ ಸಭೆಯನ್ನು ಆಯೋಜಿಸಲಾಗಿದೆ.
ಈ ಸಭೆಯು ಮೇ 30, 2026 ಶನಿವಾರ ದಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರಿನ ವುಡ್ಲ್ಯಾಂಡ್ಸ್ ಹೋಟೆಲ್ನಲ್ಲಿ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಜಾಕೆ ಮಾಧವ ಗೌಡ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.
ಸಭೆಯಲ್ಲಿ ಪಕ್ಷದ ವಿವಿಧ ಘಟಕಗಳ ಪ್ರಮುಖರು, ತಾಲೂಕು ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಪಕ್ಷದ ಸಂಘಟನೆಗೆ ಹೊಸ ಚೈತನ್ಯ ತುಂಬುವ ನಿಟ್ಟಿನಲ್ಲಿ ಸಭೆಯಲ್ಲಿ ಹಲವು ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ.
ಸಭೆಯಲ್ಲಿ ಪಕ್ಷದ ಸಂಘಟನೆ ಬಲವರ್ಧನೆ, ತಾಲೂಕು ಮಟ್ಟದ ಕಾರ್ಯಕ್ರಮಗಳ ರೂಪರೇಖೆ, ಮುಂಬರುವ ಚುನಾವಣೆಗಳಿಗೆ ಸಂಬಂಧಿಸಿದ ತಂತ್ರಗಾರಿಕೆ, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ಹಾಗೂ ಸಲಹೆಗಳ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಲಾಗಿದೆ.
ಪಕ್ಷದ ಹಿತದೃಷ್ಟಿಯಿಂದ ಈ ಸಭೆ ಅತ್ಯಂತ ಮಹತ್ವದ್ದಾಗಿರುವುದರಿಂದ ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಡ್ಡಾಯವಾಗಿ ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಘಟಕ ಮನವಿ ಮಾಡಿದೆ.
ಈ ಕುರಿತು ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಮಹಾ ಪ್ರಧಾನ ಕಾರ್ಯದರ್ಶಿಯಾದ ಯೋಗಿಶ್ ಶೆಟ್ಟಿ ಜಪ್ಪು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

