

ಮಂಗಳೂರು, ಮೇ 30 : ಜನತಾದಳ ಜಾತ್ಯತೀತ (JDS) ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಮಹಾ ಸಭೆಯು ಶನಿವಾರ ನಗರದ ವುಡ್ಲ್ಯಾಂಡ್ಸ್ ಹೋಟೆಲ್ನಲ್ಲಿ ಜಿಲ್ಲಾ ಅಧ್ಯಕ್ಷರಾದ ಜಾಕೆ ಮಾಧವ ಗೌಡ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು.

ಜಿಲ್ಲಾ ಕಾರ್ಯದ್ಯಕ್ಷರಾದ ವಸಂತ್ ಪೂಜಾರಿ ಸ್ವಾಗತಿಸಿದ್ದರು
ಸಭೆಯಲ್ಲಿ ಪಕ್ಷದ ಮಾಜಿ ಜಿಲ್ಲಾಧ್ಯಕ್ಷರಾದ ಎಂ.ಬಿ. ಸದಾಶಿವ ರವರು ನೂತನ ಪದಾಧಿಕಾರಿಗಳಿಗೆ ಹಾಗೂ ಸದಸ್ಯರಿಗೆ ಪ್ರಮಾಣವಚನ ಭೋಧಿಸಿದರು.

ಮಹಮ್ಮದ್ ಕುಂಞ ಹಾಗೂ ಹಿರಿಯ ಮುಖಂಡ ಹೈದರ್ ಪರ್ತಿಪಾಡಿ ಅವರು ಗೌರವ ಉಪಸ್ಥಿತರಾಗಿ ಪಧಾದಿಕಾರಿಗಳಿಗೆ ಮಾರ್ಗದರ್ಶನ ನೀಡಿದರು.


ಕಾರ್ಯದ್ಯಕ್ಷರುಗಳಾದ ಇಕ್ಬಲ್ ಮುಲ್ಕಿ ಮತ್ತು ಶಶಿರಾಜ್ ಶೆಟ್ಟಿ ಕೊಳಂಬೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಅಜೀಜ್ ಮಾಲರ್ ರವರು ಸಂಘಟನೆ ಬೆಳವಣೆಗೆ ಕುರಿತು ಮಾತನಾಡಿದ್ದರು. ವೀನುಗಾರ ಘಟಕ ರಾಜ್ಯಾದ್ಯಕ್ಷ ರತ್ನಕರ್ ಸುವರ್ಣ,ಜಿಲ್ಲಾ ಯುವ ಘಟಕ ಅದ್ಯಕ್ಷ ಅಕ್ಷಿತ್ ಸುವರ್ಣ, ಜಿಲ್ಲಾ ವಿದ್ಯಾರ್ಥಿ ಜನತಾದಳ ಅದ್ಯಕ್ಷ ನಿಹಾಲ್ ಕೋಡ್ತುಗೋಳಿ, ಮಾಜಿ ನಗರಪಾಲಿಕಾ ಸದಸ್ಯೆ ರಮೀಜಾ ನಾಸೀರ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಭೆಯಲ್ಲಿ ಮಾಜಿ ಕೋರ್ಪೋರೇಟರ್ ಅಜೀಜ್ ಕುದ್ರೋಳಿ, ಅಸ್ರಫ್ ಕಲ್ಲೇಗ, ವಿನ್ಸೇಟ್ ಪಿರೇರಾ, ಗಂಗಾಧರ್ ಉಳ್ಳಾಲ್ , ಪುಷ್ಪರಾಜನ್ ಮತ್ತು ಹಲವು ಜಿಲ್ಲಾ ನಾಯಕರು, ಮತ್ತು ವಿವಿಧ ಘಟಕಗಳ ಅಧ್ಯಕ್ಷರು, ತಾಲೂಕು ಅಧ್ಯಕ್ಷರು, ವಿಧಾನಸಭಾ ಕ್ಷೇತ್ರ ಅದ್ಯಕ್ಷರು ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ತಮ್ಮ ತಮ್ಮ ತಮ್ಮ ಅಭಿಪ್ರಾಯಗಳನ್ನು ತಿಳಿಸಿ ಸಭೆಗೆ ಮೆರುಗು ನೀಡಿದರು.
ಪ್ರಾರ್ಥನೆಯೊಂದಿಗೆ ಆರಂಭಗೊಂಡ ಸಭೆಯಲ್ಲಿ ಜಿಲ್ಲಾ ಘಟಕದ ವತಿಯಿಂದ ಆಗಮಿಸಿದ ಗಣ್ಯರು ಹಾಗೂ ಕಾರ್ಯಕರ್ತರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಬಳಿಕ ಸಭೆಯನ್ನು ಉದ್ಘಾಟಿಸಿದ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಅವರು ಪಕ್ಷ ಸಂಘಟನೆಗೆ ಕಾರ್ಯಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಮುಂಬರುವ ದಿನಗಳಲ್ಲಿ ಗ್ರಾಮ ಮಟ್ಟದಿಂದ ಜಿಲ್ಲಾಮಟ್ಟದವರೆಗೆ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸುವ ಸಂಕಲ್ಪದೊಂದಿಗೆ ಕಾರ್ಯನಿರ್ವಹಿಸಬೇಕೆಂದು ಕರೆ ನೀಡಿದರು.
ಸಭೆಯಲ್ಲಿ ಜಿಲ್ಲೆಯ ಪ್ರಸ್ತುತ ರಾಜಕೀಯ ಪರಿಸ್ಥಿತಿ, ಪಕ್ಷದ ಬೆಳವಣಿಗೆ, ಸದಸ್ಯತ್ವ ಅಭಿಯಾನದ ಪ್ರಗತಿ ಹಾಗೂ ಸಂಘಟನೆಯ ವಿಸ್ತರಣೆಯ ಕುರಿತು ಸುದೀರ್ಘ ಚರ್ಚೆ ನಡೆಯಿತು. ಬೂತ್ ಮಟ್ಟದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಪ್ರತಿ ಗ್ರಾಮ ಪಂಚಾಯತ್ ಹಾಗೂ ವಾರ್ಡ್ ಮಟ್ಟದಲ್ಲಿ ಪಕ್ಷದ ಸಮಿತಿಗಳನ್ನು ರಚಿಸುವ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳಲಾಯಿತು.ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕ್ಷೇತ್ರವಾರು ಕಾರ್ಯತಂತ್ರ ರೂಪಿಸುವುದು, ಜಿಲ್ಲಾ ಕಾರ್ಯದ್ಯಕ್ಷರಿಗೆ ಜವಾಬ್ದಾರಿಗಳನ್ನು ಹಂಚಿಕೆ ಮಾಡುವುದು ಹಾಗೂ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಜನಪರ ಹೋರಾಟಗಳನ್ನು ಸಂಘಟಿಸುವ ಕುರಿತು ಚರ್ಚಿಸಿ ರೂಪುರೇಷೆಗಳನ್ನು ಸಿದ್ಧಪಡಿಸಲಾಯಿತು.ಜಿಲ್ಲೆಯ ವಿವಿಧ ಭಾಗಗಳಲ್ಲಿ ಜನರು ಎದುರಿಸುತ್ತಿರುವ ಮೂಲಭೂತ ಸೌಕರ್ಯಗಳ ಕೊರತೆ, ರೈತರು ಮತ್ತು ಕಾರ್ಮಿಕರ ಸಮಸ್ಯೆಗಳು ಸೇರಿದಂತೆ ಸಾರ್ವಜನಿಕ ಹಿತಾಸಕ್ತಿಯ ವಿಷಯಗಳಲ್ಲಿ ಪಕ್ಷವು ಹೋರಾಟದ ಧೋರಣೆಯನ್ನು ಅನುಸರಿಸಬೇಕೆಂಬ ಅಭಿಪ್ರಾಯ ವ್ಯಕ್ತವಾಯಿತು. ಈ ನಿಟ್ಟಿನಲ್ಲಿ ತಾಲೂಕು ಮಟ್ಟದಲ್ಲಿ ಜಿಲ್ಲಾ ಸಭೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು.ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮ ವಿಭಾಗವನ್ನು ಮತ್ತಷ್ಟು ಬಲಪಡಿಸಿ ಪಕ್ಷದ ಚಟುವಟಿಕೆಗಳು ಹಾಗೂ ಜನಪರ ಹೋರಾಟಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಕುರಿತು ವಿಶೇಷ ಚರ್ಚೆ ನಡೆಯಿತು.ಸಭೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕು ಘಟಕಗಳ ಅಧ್ಯಕ್ಷರು ತಮ್ಮ ಕಾರ್ಯ ವರದಿಗಳನ್ನು ಮಂಡಿಸಿ, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಕುರಿತು ಸಲಹೆ-ಸೂಚನೆಗಳನ್ನು ನೀಡಿದರು. ಕಾರ್ಯಕರ್ತರ ಅಭಿಪ್ರಾಯಗಳನ್ನು ಆಲಿಸಿದ ಜಿಲ್ಲಾಧ್ಯಕ್ಷರು ಸಂಘಟನೆ ಬಲವರ್ಧನೆಗೆ ಸಂಬಂಧಿಸಿದ ಕೆಲವು ಮಹತ್ವದ ವಿಶೇಷ ನಿರ್ಣಯಗಳನ್ನು ಪ್ರಕಟಿಸಿದರು.ಮುಂದಿನ ಸಭೆಗೆ ಎಸ್ ಎಲ್ ಭೋಜೆಗೌಡ ರವರನ್ನು ಆಹ್ವಾನಿಸಿ ಪಕ್ಷದ ಬೆಳವಣೆಗೆಗೆ ಮಾರ್ಗದರ್ಶನ ಪಡೆಯುದಾಗಿ ತೀರ್ಮಾನಿಸಲಾಯಿತು. ಪಕ್ಷದ ಬೆಳವಣಿಗೆಗಾಗಿ ಎಲ್ಲ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕೆಂದು ನಿರ್ದರಿಸಲಾಯಿತು. ಈ ಸಭೆಯು ಪಕ್ಷದ ಸಂಘಟನೆಗೆ ಹೊಸ ಚೈತನ್ಯ ತುಂಬುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೆಡಿಎಸ್ ಅನ್ನು ಮತ್ತಷ್ಟು ಬಲಿಷ್ಠಗೊಳಿಸುವ ದಿಸೆಯಲ್ಲಿ ಮಹತ್ವದ ಮೈಲಿಗಲ್ಲಾಗಿ ಪರಿಣಮಿಸಿದೆ ಎಂದು ಮುಖಂಡರು ಅಭಿಪ್ರಾಯಪಟ್ಟರು.ಸಭೆಯ ಅಂತ್ಯದಲ್ಲಿ ಧನ್ಯವಾದ ಸಮರ್ಪಿಸಲಾಯಿತು. ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು ಕಾರ್ಯಕ್ರಮ ನಿರೂಪಣೆ ಮಾಡಿದರು




