ಬಂಟ್ವಾಳ, ಜೂನ್ 5: ಮೆಲ್ಕಾರ್ ಫ್ಲೈಓವರ್ ಸಮೀಪ ಕಾರಿನಲ್ಲಿ ಸಾಗಿಸಲಾಗುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಎಂಡಿಎಂಎ (MDMA) ಮಾದಕ ವಸ್ತುವನ್ನು ಬಂಟ್ವಾಳ ನಗರ ಪೊಲೀಸರು ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜೂನ್ 4ರಂದು ಸಂಜೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ಅವರ ನೇತೃತ್ವದ ಪೊಲೀಸ್ ತಂಡವು ಮೆಲ್ಕಾರ್ ಫ್ಲೈಓವರ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಕಾರೊಂದನ್ನು ತಡೆದು ಪರಿಶೀಲನೆ ನಡೆಸಿತು. ಈ ವೇಳೆ ಕಾರಿನೊಳಗೆ ಮಾದಕ ವಸ್ತು ಸೇವನೆಗೆ ಬಳಸುವ ಸಾಧನಗಳು ಪತ್ತೆಯಾಗಿದ್ದು, ವಾಹನದಲ್ಲಿದ್ದ ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸಲಾಯಿತು.
ವಿಚಾರಣೆಯ ವೇಳೆ ಆರೋಪಿಗಳು ಬಂಟ್ವಾಳ ಪುದು ನಿವಾಸಿ ಎ. ಜುಬೇರ್ (39), ಸಜಿಪೆ ಮುನ್ನೂರು ನಿವಾಸಿ ಮೊಹಮ್ಮದ್ ಸವಾದ್ (36) ಹಾಗೂ ಬಿ. ಮೂಡ ನಿವಾಸಿ ಬಿ.ಎಂ. ರಶೀದ್ ಅಲಿಯಾಸ್ ಮಾರಿಯತ್ತು ಎಂದು ಗುರುತಿಸಲ್ಪಟ್ಟಿದ್ದಾರೆ. ಆರೋಪಿಗಳು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಎಂಡಿಎಂಎ ಮಾದಕ ವಸ್ತು ಸಾಗಿಸುತ್ತಿದ್ದುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತಪಾಸಣೆ ವೇಳೆ ಆರೋಪಿಗಳ ಬಳಿಯಿಂದ ಹಾಗೂ ಕಾರಿನಲ್ಲಿದ್ದ ಅಂದಾಜು ₹7.64 ಲಕ್ಷ ಮೌಲ್ಯದ 76 ಗ್ರಾಂ 40 ಮಿಲಿಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ಮಾದಕ ವಸ್ತು ಸೇವನೆಗೆ ಬಳಸುವ ಉಪಕರಣಗಳು, ಮೂರು ಮೊಬೈಲ್ ಫೋನ್ಗಳು ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ KA-19 MR-1997 ನೋಂದಣಿ ಸಂಖ್ಯೆಯ ಕಾರನ್ನು ಜಪ್ತಿ ಮಾಡಲಾಗಿದೆ.
ಬಂಧಿತ ಆರೋಪಿಗಳ ವಿರುದ್ಧ ಮಾದಕ ದ್ರವ್ಯ ಮತ್ತು ಮನೋವಿಕಾರಿ ವಸ್ತುಗಳ ನಿಯಂತ್ರಣ ಕಾಯ್ದೆ (NDPS Act) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಎಂಡಿಎಂಎ ಎಲ್ಲಿಂದ ತರಲಾಗಿತ್ತು ಹಾಗೂ ಯಾರಿಗೆ ಮಾರಾಟ ಮಾಡಲು ಯೋಜನೆ ರೂಪಿಸಲಾಗಿತ್ತು ಎಂಬ ಕುರಿತು ಬಂಟ್ವಾಳ ನಗರ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
ಈ ಕಾರ್ಯಾಚರಣೆಯನ್ನು ಪೊಲೀಸ್ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಯಶಸ್ವಿಯಾಗಿ ನಡೆಸಿದ್ದಾರೆ.
Trending
- ಜೆಡಿಎಸ್ ಮಹಿಳಾ ಘಟಕದ ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷೆಯಾಗಿ ಮೋಹಿನಿ ನಾಯ್ಕ್ ನೇಮಕ
- ಬ್ರಹ್ಮಾವರದಲ್ಲಿ ಯುವತಿ ಅನುಮಾನಾಸ್ಪದ ಸಾವು: ಅಪಾರ್ಟ್ಮೆಂಟ್ ಕೊಠಡಿಯಲ್ಲಿ ಮೃತದೇಹ ಪತ್ತೆ, ಮೂರ್ಛೆ ರೋಗ ಕಾರಣವೇ?
- ಮೆಲ್ಕಾರ್ ಫ್ಲೈಓವರ್ ಬಳಿ ಲಕ್ಷಾಂತರ ಮೌಲ್ಯದ ಎಂಡಿಎಂಎ ವಶ: ಮೂವರು ಆರೋಪಿಗಳ ಬಂಧನ
- ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗಲಿಲ್ಲ? – ಡಿ.ಕೆ. ಶಿವಕುಮಾರ್ಗೆ ಕಾಂಗ್ರೇಸ್ ಶಾಸಕ ಕೆ.ಎನ್. ರಾಜಣ್ಣ ತಿರುಗೇಟು
- ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಬಲಿ , ಕೊಡಗಿನಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಮತ್ತೊಂದು ದುರ್ಘಟನೆ
- ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬೈರಾಡಿಕೆರೆಯಲ್ಲಿ ಸಸಿ ನೆಡುವ ಕಾರ್ಯಕ್ರಮ
- ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಘಟಕ ಅಧ್ಯಕ್ಷೆಯಾಗಿ ರಮೀಝಾ ನಾಸೀರ್ ನೇಮಕ
- ಪೆದ್ದಿ’ಗೆ ಭರ್ಜರಿ ಆರಂಭ: ಮೊದಲ ದಿನವೇ 100 ಕೋಟಿ ರೂ. ಗ್ರಾಸ್ ಕಲೆಕ್ಷನ್, ರಾಮ್ ಚರಣ್ಗೆ ಬಿಗ್ ಕಂಬ್ಯಾಕ್!

