ಉಡುಪಿ, ಜೂನ್ 21: ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಮಹಿಳಾ ಘಟಕದ ಪದಾಧಿಕಾರಿಗಳ ಆಯ್ಕೆ ಸಭೆಯು ಭಾನುವಾರ ಉಡುಪಿ ಬಸ್ ನಿಲ್ದಾಣದ ಸಮೀಪದ ಅಕ್ಷಯ ಟವರ್ನಲ್ಲಿ ಯಶಸ್ವಿಯಾಗಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ನಾಗಲಕ್ಷ್ಮಿ ವಹಿಸಿದ್ದರು. ಸಭೆಯಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಮಹಿಳಾ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಆಯ್ಕೆಯಾದ ಪದಾಧಿಕಾರಿಗಳ ವಿವರ ಹೀಗಿದೆ:
- ಗಾಯತ್ರಿ ~ ಉಪಾದ್ಯಕ್ಷರು
• ಪವಿತ್ರ ಆಚಾರ್ಯ – ಜಿಲ್ಲಾ ಪ್ರಧಾನ ಕಾರ್ಯದರ್ಶಿ
• ವನಿತಾ ಆಚಾರ್ಯ – ಜಿಲ್ಲಾ ಜೊತೆ ಕಾರ್ಯದರ್ಶಿ
• ಮಂಜುಳಾ – ಜಿಲ್ಲಾ ಮಹಿಳಾ ಸಾಂಸ್ಕೃತಿಕ ಘಟಕದ ಅಧ್ಯಕ್ಷೆ
• ವೀಣಾ ಪ್ರಾಣೇಶ್ – ಜಿಲ್ಲಾ ಮಹಿಳಾ ಕ್ರೀಡಾ ಘಟಕದ ಅಧ್ಯಕ್ಷೆ
• ನಿರ್ಮಲ ಮೆಂಡನ್ – ಜಿಲ್ಲಾ ಮಹಿಳಾ ಸಂಘಟನಾ ಕಾರ್ಯದರ್ಶಿ
• ಮಮತಾ – ಜಿಲ್ಲಾ ಮಹಿಳಾ ಸಂಘಟನಾ ಜೊತೆ ಕಾರ್ಯದರ್ಶಿ
ಸಭೆಯಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಅಧ್ಯಕ್ಷರಾದ ಫ್ರಾಂಕಿ ಡಿಸೋಜ ಕೊಳಲಗಿರಿ ಅವರು ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳನ್ನು ಅಭಿನಂದಿಸಿ ಸನ್ಮಾನಿಸಿದರು. ಮಹಿಳಾ ಘಟಕದ ಮೂಲಕ ಸಂಘಟನೆಯನ್ನು ಗ್ರಾಮ ಮಟ್ಟದವರೆಗೆ ಬಲಪಡಿಸುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷರಾದ ಜಯ ಪೂಜಾರಿ, ಜಿಲ್ಲಾ ಜೊತೆ ಕಾರ್ಯದರ್ಶಿ ಪ್ರೀತಮ್ ಡಿಕೋಸ್ಟ, ಕಾಪು ತಾಲೂಕು ಘಟಕದ ಅಧ್ಯಕ್ಷ ನಿತಿನ್ ಕುಮಾರ್ ಶೆಟ್ಟಿ, ಕಾಪು ಮಹಿಳಾ ಘಟಕದ ಅಧ್ಯಕ್ಷೆ ಅನುಸೂಯಾ ಶೆಟ್ಟಿ, ಬೈರಂಪಳ್ಳಿ ಘಟಕದ ಉಪಾಧ್ಯಕ್ಷ ಗುಣಾಕರ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಂಕರ್ ಉಡುಪಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹಾಗೆಯೇ ಕಾಪು ಮಹಿಳಾ ಘಟಕದ ಗೌರವಾಧ್ಯಕ್ಷೆ ರೋಶನ್ ಬಲ್ಲಾಳ್, ಉಪಾಧ್ಯಕ್ಷೆ ರೋಹಿಣಿ ಶೆಟ್ಟಿ, ಸುಲೋಚನ, ಜ್ಯೋತಿ ಆರ್., ಗೀತಾ, ಉಷಾ ಎಸ್. ಕೋಟ್ಯಾನ್, ವಿನೋದ್ ಸೇರಿದಂತೆ ಅನೇಕ ಮಹಿಳಾ ಕಾರ್ಯಕರ್ತೆಯರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಉಷಾ ಎಸ್. ಕೋಟ್ಯಾನ್ ಹಾಗೂ ಗೀತಾ ಅವರು ತುಳುನಾಡ ರಕ್ಷಣಾ ವೇದಿಕೆಗೆ ಸೇರ್ಪಡೆಯಾಗಿ ಸಂಘಟನೆಯ ಸದಸ್ಯತ್ವ ಸ್ವೀಕರಿಸಿದರು.
ಸಭೆಯಲ್ಲಿ ಮಹಿಳಾ ಘಟಕದ ಮುಂದಿನ ಕಾರ್ಯಕ್ರಮಗಳು, ಸಂಘಟನೆ ವಿಸ್ತರಣೆ ಹಾಗೂ ಸಾಮಾಜಿಕ ಚಟುವಟಿಕೆಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು. ಮಹಿಳಾ ಘಟಕದ ಬಲವರ್ಧನೆಗೆ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಸಂಕಲ್ಪ ಕೈಗೊಳ್ಳಲಾಯಿತು.
ವರದಿ : ಸುರೇಂದ್ರ ಪೂಜಾರಿ
ಪ್ರಧಾನ ಕಾರ್ಯದರ್ಶಿ
ತುಳುನಾಡ ರಕ್ಷಣಾ ವೇದಿಕೆ, ಉಡುಪಿ ಜಿಲ್ಲೆ

