ಉಡುಪಿ, ಜೂನ್ 23: ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.
ಬೆದರಿಕೆ ಸಂದೇಶದ ಮಾಹಿತಿ ಲಭಿಸುತ್ತಿದ್ದಂತೆ ಉಡುಪಿ ನಗರ ಪೊಲೀಸರು, ಶ್ವಾನ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ನ್ಯಾಯಾಲಯ ಸಂಕೀರ್ಣಕ್ಕೆ ಧಾವಿಸಿ ಶೋಧ ಕಾರ್ಯಾಚರಣೆ ಆರಂಭಿಸಿದರು. ನ್ಯಾಯಾಲಯದ ಕಟ್ಟಡ ಹಾಗೂ ಆವರಣದ ವಿವಿಧ ಭಾಗಗಳಲ್ಲಿ ಸುದೀರ್ಘ ಪರಿಶೀಲನೆ ನಡೆಸಲಾಯಿತು.
ಭದ್ರತಾ ದೃಷ್ಟಿಯಿಂದ ನ್ಯಾಯಾಲಯ ಸಂಕೀರ್ಣದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ನ್ಯಾಯಾಲಯಕ್ಕೆ ಆಗಮಿಸುವ ಸಾರ್ವಜನಿಕರು ಹಾಗೂ ಸಿಬ್ಬಂದಿಯ ಮೇಲೂ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ.
ಇದೇ ವೇಳೆ ಬೆದರಿಕೆ ಸಂದೇಶ ಕಳುಹಿಸಿದವರ ಪತ್ತೆಗಾಗಿ ಪೊಲೀಸರು ತನಿಖೆ ಆರಂಭಿಸಿದ್ದು, ಇಮೇಲ್ನ ಮೂಲವನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ.
ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದ್ದು, ಶೋಧ ಕಾರ್ಯಾಚರಣೆ ಪೂರ್ಣಗೊಂಡ ಬಳಿಕವೇ ಬೆದರಿಕೆ ಸಂದೇಶದ ಸತ್ಯಾಸತ್ಯತೆ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ
Trending
- ಸೇವಾ ಸಂಕಲ್ಪ ಅಭಿಯಾನಕ್ಕೆ ಮಾದರಿ ಹೆಜ್ಜೆ ಕುಲಶೇಖರ ಕಲ್ಪನೆ ಪರಿಸರದಲ್ಲಿ ನವೀಕೃತ ಬಸ್ ನಿಲ್ದಾಣ ಉದ್ಘಾಟನೆ
- ಮಾಡೂರು ಶ್ರೀ ಶಿವ ದುರ್ಗಾಂಬಾ ಮಠದಲ್ಲಿ ಅ.15ರಿಂದ ನವರಾತ್ರಿ ಮಹೋತ್ಸವ ವಿಶೇಷ ಪೂಜೆ, ಗಣಹೋಮ, ಮಹಾ ಚಂಡಿಕಾಯಾಗ, ಅಖಂಡ ಭಜನೆ ಹಾಗೂ ಅನ್ನಸಂತರ್ಪಣೆ
- ಗಾಂಧಿ ಜಯಂತಿ ಅಂಗವಾಗಿ ಉಡುಪಿಯಲ್ಲಿ ತುಳುನಾಡ ರಕ್ಷಣಾ ವೇದಿಕೆಯಿಂದ ವಿಶೇಷ ಕಾರ್ಯಕ್ರಮ ಗಾಂಧೀಜಿ ತತ್ವಗಳನ್ನು ಸ್ಮರಿಸಿ ತಾಯಿ–ಮಕ್ಕಳ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ
- ಅ.5ರಂದು ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದಿಂದ ಬೆಂಗಳೂರಿನಲ್ಲಿ ಶಾಂತಿಯುತ ಪ್ರತಿಭಟನೆ
- MRPL ಸ್ಫೋಟ ಪ್ರಕರಣ: ನಿರ್ಲಕ್ಷ್ಯದ ಆರೋಪದಡಿ FIR ಗಂಭೀರ ಗಾಯಗೊಂಡ ಕಾರ್ಮಿಕ ಮನೀಶ್ ಕರ್ಕಡ ಸಾವು; ಸುತ್ತಮುತ್ತ 54 ಮನೆಗಳಿಗೆ ಹಾನಿ
- ಎಂಆರ್ಪಿಎಲ್ ಸ್ಫೋಟ: ಸ್ಥಳೀಯರ ಸುರಕ್ಷತೆಯೊಂದಿಗೆ ಯಾವುದೇ ರಾಜಿ ಬೇಡ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ, ಗಾಯಾಳುಗಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡಲಿ ಕೈಗಾರಿಕೆ ಆರಂಭದ ವೇಳೆ ನೀಡಿದ ಭರವಸೆಗಳು ಅನುಷ್ಠಾನವಾಗಲಿ: ಯೋಗಿಶ್ ಶೆಟ್ಟಿ ಜಪ್ಪು
- ಎಂಆರ್ಪಿಎಲ್ನಲ್ಲಿ ಭಾರೀ ಸ್ಫೋಟ: ಎಂಟು ಮಂದಿ ಗಾಯ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಬೆಂಕಿ; ಓರ್ವನಿಗೆ ಶೇ.35ರಷ್ಟು ಸುಟ್ಟ ಗಾಯ
- ಎಂಆರ್ಪಿಎಲ್ ಘಟಕದಲ್ಲಿ ಭಾರೀ ಸ್ಫೋಟದ ಸದ್ದು: ಬೆಂಕಿ, ದಟ್ಟ ಹೊಗೆಯಿಂದ ಸ್ಥಳೀಯರಲ್ಲಿ ಆತಂಕ

