ಜೂನ್ 26: ಜನತಾದಳ (ಜಾತ್ಯತೀತ) ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಹಿಳಾ ಕಾರ್ಯಕರ್ತರ ಸಭೆಯು ಜೂನ್ 26, 2026ರಂದು ಪಡೀಲ್ನ ನಿಟ್ಟೆ ಎಜುಕೇಷನ್ ಟ್ರಸ್ಟ್ ಸಭಾಂಗಣದಲ್ಲಿ ಮಾಜಿ ಮಹಿಳಾ ಅಧ್ಯಕ್ಷೆ ಸುಮತಿ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಹಿಳಾ ಅಧ್ಯಕ್ಷೆ ವೀಣಾ ಶೆಟ್ಟಿ, ಪಕ್ಷ ಸಂಘಟನೆಯನ್ನು ತಳಮಟ್ಟದಲ್ಲಿ ಇನ್ನಷ್ಟು ಬಲಪಡಿಸುವ ಅಗತ್ಯವನ್ನು ಒತ್ತಿ ಹೇಳಿದರು. ಮಹಿಳೆಯರು ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದ ಅವರು, ಇದೇ ಸಂದರ್ಭದಲ್ಲಿ ಹಲವಾರು ಮಹಿಳೆಯರನ್ನು ಜನತಾದಳ (ಜಾತ್ಯತೀತ) ಪಕ್ಷಕ್ಕೆ ಸೇರ್ಪಡೆಗೊಳಿಸಿದರು.
ಅಂದು ವಿಶ್ವ ತಂಬಾಕು ಮುಕ್ತ ದಿನದ ಅಂಗವಾಗಿ ಆಯೋಜಿಸಿದ್ದ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ತಂಬಾಕು ಮುಕ್ತ ಸಮಾಜ ನಿರ್ಮಾಣದ ಅಗತ್ಯತೆ ಹಾಗೂ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಉಪನ್ಯಾಸ ನಡೆಯಿತು. ಆರೋಗ್ಯಕರ ಜೀವನಶೈಲಿಯ ಮಹತ್ವದ ಬಗ್ಗೆ ಕಾರ್ಯಕರ್ತರಿಗೆ ಅರಿವು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಎನ್.ಟಿ. ಪುಷ್ಪರಾಜನ್ ಉಪಸ್ಥಿತರಿದ್ದು, ಮಹಿಳಾ ಘಟಕದ ಸಂಘಟನಾ ಕಾರ್ಯಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದ ಕೊನೆಯಲ್ಲಿ ವೀಣಾ ಶೆಟ್ಟಿ ವಂದನಾರ್ಪಣೆ ಸಲ್ಲಿಸಿದರು. ಬಳಿಕ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲಾ ಕಾರ್ಯಕರ್ತರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.
ಈ ಸಭೆಯಲ್ಲಿ ಮಹಿಳಾ ಕಾರ್ಯಕರ್ತರು ಹಾಗೂ ಪಕ್ಷದ ಪ್ರಮುಖ ಮುಖಂಡರು ಭಾಗವಹಿಸಿ, ಸಂಘಟನೆ ಬಲವರ್ಧನೆ ಹಾಗೂ ಮುಂಬರುವ ಕಾರ್ಯಕ್ರಮಗಳ ಕುರಿತು ಚರ್ಚಿಸಿದರು.
Trending
- ಸೇವಾ ಸಂಕಲ್ಪ ಅಭಿಯಾನಕ್ಕೆ ಮಾದರಿ ಹೆಜ್ಜೆ ಕುಲಶೇಖರ ಕಲ್ಪನೆ ಪರಿಸರದಲ್ಲಿ ನವೀಕೃತ ಬಸ್ ನಿಲ್ದಾಣ ಉದ್ಘಾಟನೆ
- ಮಾಡೂರು ಶ್ರೀ ಶಿವ ದುರ್ಗಾಂಬಾ ಮಠದಲ್ಲಿ ಅ.15ರಿಂದ ನವರಾತ್ರಿ ಮಹೋತ್ಸವ ವಿಶೇಷ ಪೂಜೆ, ಗಣಹೋಮ, ಮಹಾ ಚಂಡಿಕಾಯಾಗ, ಅಖಂಡ ಭಜನೆ ಹಾಗೂ ಅನ್ನಸಂತರ್ಪಣೆ
- ಗಾಂಧಿ ಜಯಂತಿ ಅಂಗವಾಗಿ ಉಡುಪಿಯಲ್ಲಿ ತುಳುನಾಡ ರಕ್ಷಣಾ ವೇದಿಕೆಯಿಂದ ವಿಶೇಷ ಕಾರ್ಯಕ್ರಮ ಗಾಂಧೀಜಿ ತತ್ವಗಳನ್ನು ಸ್ಮರಿಸಿ ತಾಯಿ–ಮಕ್ಕಳ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ
- ಅ.5ರಂದು ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದಿಂದ ಬೆಂಗಳೂರಿನಲ್ಲಿ ಶಾಂತಿಯುತ ಪ್ರತಿಭಟನೆ
- MRPL ಸ್ಫೋಟ ಪ್ರಕರಣ: ನಿರ್ಲಕ್ಷ್ಯದ ಆರೋಪದಡಿ FIR ಗಂಭೀರ ಗಾಯಗೊಂಡ ಕಾರ್ಮಿಕ ಮನೀಶ್ ಕರ್ಕಡ ಸಾವು; ಸುತ್ತಮುತ್ತ 54 ಮನೆಗಳಿಗೆ ಹಾನಿ
- ಎಂಆರ್ಪಿಎಲ್ ಸ್ಫೋಟ: ಸ್ಥಳೀಯರ ಸುರಕ್ಷತೆಯೊಂದಿಗೆ ಯಾವುದೇ ರಾಜಿ ಬೇಡ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ, ಗಾಯಾಳುಗಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡಲಿ ಕೈಗಾರಿಕೆ ಆರಂಭದ ವೇಳೆ ನೀಡಿದ ಭರವಸೆಗಳು ಅನುಷ್ಠಾನವಾಗಲಿ: ಯೋಗಿಶ್ ಶೆಟ್ಟಿ ಜಪ್ಪು
- ಎಂಆರ್ಪಿಎಲ್ನಲ್ಲಿ ಭಾರೀ ಸ್ಫೋಟ: ಎಂಟು ಮಂದಿ ಗಾಯ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಬೆಂಕಿ; ಓರ್ವನಿಗೆ ಶೇ.35ರಷ್ಟು ಸುಟ್ಟ ಗಾಯ
- ಎಂಆರ್ಪಿಎಲ್ ಘಟಕದಲ್ಲಿ ಭಾರೀ ಸ್ಫೋಟದ ಸದ್ದು: ಬೆಂಕಿ, ದಟ್ಟ ಹೊಗೆಯಿಂದ ಸ್ಥಳೀಯರಲ್ಲಿ ಆತಂಕ

