ಮಂಗಳೂರು, ಜುಲೈ 9: ಸುರತ್ಕಲ್ ಸಮೀಪದ ಕಾಟಿಪಳ್ಳದ ಅಲ್ ಬದ್ರಿಯಾ ಮದರಸಕ್ಕೆ ನುಗ್ಗಿ ಉಸ್ತಾದ್ ಮೇಲೆ ಹಲ್ಲೆ ನಡೆಸಿದ ಆರೋಪದಡಿ ದಂಪತಿ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಭ್ಯ ಮಾಹಿತಿಯಂತೆ, ಮದರಸೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 12 ವರ್ಷದ ಬಾಲಕನಿಗೆ ಶಿಸ್ತು ಕ್ರಮದ ಭಾಗವಾಗಿ ಉಸ್ತಾದ್ ಉಮರ್ ಫಾರೂಕ್ ಬೆತ್ತದಿಂದ ಹೊಡೆದಿದ್ದಾರೆ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಬಾಲಕನ ತಂದೆ ಸಂಬುದ್ದೀನ್ ಹಾಗೂ ಅವರ ಪತ್ನಿ ಮದರಸೆಗೆ ಆಗಮಿಸಿ ಉಸ್ತಾದ್ ಉಮರ್ ಫಾರೂಕ್ ಅವರ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಘಟನೆ ವೇಳೆ ಮದರಸೆಯೊಳಗೆ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಹಲ್ಲೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಈ ಸಂಬಂಧ ಅಲ್ ಬದ್ರಿಯಾ ಜುಮಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಎಂ.ಎ. ಹನೀಫ್ ನೀಡಿದ ದೂರಿನ ಮೇರೆಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಸಂಬುದ್ದೀನ್ ಹಾಗೂ ಅವರ ಪತ್ನಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಕಲಂ 329(1), 115(2), 352, 351(2), 351(3) ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
Trending
- ತುಳು ಭಾಷಾ ಕಲಿಕಾ ಪುಸ್ತಕ ಬಿಡುಗಡೆ
- ಉಡುಪಿ ಜಿಲ್ಲೆಯಲ್ಲಿ ಉದ್ಯಮಿಗಳಿಗೆ ಬೆದರಿಕೆ ಕರೆ! ಹೆಮಂತ್ ಪೂಜಾರಿ ಹೆಸರಿನಲ್ಲಿ ₹5 ಕೋಟಿ ಸುಲಿಗೆಗೆ ಬೇಡಿಕೆ
- ಎಲ್ಲರ ಪ್ರೀತಿ, ಆಶೀರ್ವಾದದಿಂದ ಮತ್ತೆ ನಿಮ್ಮೊಂದಿಗೆ ಬೆರೆಯುವಂತಾಗಿದೆ: ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್
- ವೈದ್ಯರ ಕ್ಲಿನಿಕ್ಗೆ ಬೆಂಕಿ ಹಚ್ಚಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮಕ್ಕೆ ಯೋಗಿಶ್ ಶೆಟ್ಟಿ ಜಪ್ಪು ಆಗ್ರಹ
- ಗ್ರಾಹಕರ ಹಕ್ಕುಗಳ ರಕ್ಷಣೆಗೆ ರಾಜ್ಯ ಸರ್ಕಾರ ವಿಶೇಷ ಆದ್ಯತೆ ನೀಡಲಿ: ಯೋಗಿಶ್ ಶೆಟ್ಟಿ ಜಪ್ಪು ಆಗ್ರಹ ಹಾಲ್ಮಾರ್ಕಿಂಗ್, ಗುಣಮಟ್ಟದ ಉತ್ಪನ್ನಗಳ ಮಾರಾಟ ಮತ್ತು ಗ್ರಾಹಕ ಜಾಗೃತಿಗೆ ಒಂಬತ್ತು ಪ್ರಮುಖ ಬೇಡಿಕೆಗಳೊಂದಿಗೆ ಮುಖ್ಯಮಂತ್ರಿಗಳಿಗೆ ಮನವಿ
- ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಡಾ. ಸುಧಾ ಯಾದವ್ ನೇಮಕ ಮಾಜಿ ಸಂಸದೆ, ಶಿಕ್ಷಣ ತಜ್ಞೆ ಡಾ. ಸುಧಾ ಯಾದವ್ಗೆ ಮಹತ್ವದ ಜವಾಬ್ದಾರಿ; ಕರ್ನಾಟಕದ ಎರಡನೇ ಮಹಿಳಾ ರಾಜ್ಯಪಾಲೆ
- ನಮ್ಮ ಕರ್ನಾಟಕ ಸೇನೆಯ ಸುಜಯ್ ಪೂಜಾರಿ ಅವರಿಗೆ ನಾಲ್ಕು ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿ
- ತುಳುನಾಡ ರಕ್ಷಣಾ ವೇದಿಕೆಯ ದುಬೈ ಘಟಕದ ಅಧ್ಯಕ್ಷ, ತುಳು ಕಲಾವಿದ ಅಶೋಕ್ ಬೈಲೂರು ಅವರಿಗೆ ಸನ್ಮಾನ ತುಳು ಭಾಷೆ, ಕಲೆ ಮತ್ತು ಸಂಸ್ಕೃತಿಯ ಉಳಿವಿನಲ್ಲಿ ಕಲಾವಿದರ ಪಾತ್ರ ಮಹತ್ವದ್ದು – ಫ್ರ್ಯಾಂಕಿ ಡಿಸೋಜ ಕೊಳಲಗಿರಿ

