ಬೆಂಗಳೂರು, ಜುಲೈ 12: ಜನತಾದಳ (ಜಾತ್ಯತೀತ) ಪಕ್ಷದ ಬೆಂಗಳೂರು ನಗರ ಅಲ್ಪಸಂಖ್ಯಾತ ಘಟಕದ ಜಿಬಿಎ (GBA) ವಿಭಾಗದ ಉಪಾಧ್ಯಕ್ಷರಾಗಿ ಶ್ರೀ ಶೋಯಬ್ ಬಾಬಾ ಜಿ ಅವರನ್ನು ನೇಮಕ ಮಾಡಲಾಗಿದೆ.
ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಹಾಗೂ ಅಲ್ಪಸಂಖ್ಯಾತ ಸಮುದಾಯದ ನಡುವೆ ಪಕ್ಷದ ತತ್ವ, ಸಿದ್ಧಾಂತ ಮತ್ತು ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ ಈ ನೇಮಕಾತಿ ಮಾಡಲಾಗಿದೆ. ಇದರೊಂದಿಗೆ ಪಕ್ಷ ಸಂಘಟನೆಯ ಹಿತದೃಷ್ಟಿಯಿಂದ ಇನ್ನೂ ಕೆಲವು ಹೆಚ್ಚುವರಿ ಜವಾಬ್ದಾರಿಗಳನ್ನು ಸಹ ವಿವಿಧ ಪದಾಧಿಕಾರಿಗಳಿಗೆ ವಹಿಸಲಾಗಿದೆ.

ಈ ನೇಮಕಾತಿಯಿಂದ ಬೆಂಗಳೂರು ನಗರದಲ್ಲಿ ಜನತಾದಳ (ಜಾತ್ಯತೀತ) ಪಕ್ಷದ ಅಲ್ಪಸಂಖ್ಯಾತ ಘಟಕದ ಸಂಘಟನೆಗೆ ಹೊಸ ಚೈತನ್ಯ ದೊರೆಯಲಿದ್ದು, ಪಕ್ಷದ ಬೆಳವಣಿಗೆಗೆ ಶೋಯಬ್ ಬಾಬಾ ಜಿ ಅವರು ಸಮರ್ಥವಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಲಾಗಿದೆ.

ಈ ಸಂದರ್ಭದಲ್ಲಿ ಬೆಂಗಳೂರು ನಗರ ಜಿಬಿಎ (GBA) ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಫ್ರೋಜ್ ಬೈಗ್ ಅವರು ಶ್ರೀ ಶೋಯಬ್ ಬಾಬಾ ಜಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ನೂತನ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುವಂತೆ ಶುಭ ಹಾರೈಸಿದ್ದಾರೆ.

