ಉಡುಪಿ, ಜುಲೈ 12: ತುಳುನಾಡ ರಕ್ಷಣಾ ವೇದಿಕೆ (ರಿ.) ಭೈರಂಪಳ್ಳಿ ಘಟಕದ ಪದಾಧಿಕಾರಿಗಳ ಸಭೆಯು ಭಾನುವಾರ ಸಂಜೆ ಭೈರಂಪಳ್ಳಿ ಸಾಂತ್ಯಾರ್ ಅಂಬೇಡ್ಕರ್ ಸಭಾಭವನದಲ್ಲಿ ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜಾ ಕೊಳಲಗಿರಿ ಅವರ ನೇತೃತ್ವದಲ್ಲಿ ಹಾಗೂ ಕಾಪು ತಾಲೂಕು ಅಧ್ಯಕ್ಷ ನಿತಿನ್ ಕುಮಾರ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ನಡೆಯಿತು.
ಸಭೆಯಲ್ಲಿ ಸಂಘಟನೆಯ ಬಲವರ್ಧನೆ, ಸದಸ್ಯತ್ವ ವಿಸ್ತರಣೆ, ಸಂಘಟನಾ ಚಟುವಟಿಕೆಗಳು ಹಾಗೂ ಮುಂದಿನ ಕಾರ್ಯಕ್ರಮಗಳ ಕುರಿತು ಸಮಗ್ರ ಚರ್ಚೆ ನಡೆಯಿತು. ಇದೇ ವೇಳೆ ಭೈರಂಪಳ್ಳಿ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ನಿಶಾಂತ್ ಪೂಜಾರಿ ಮುಟ್ಟಿಕಲ್ಲು, ಶಿರೂರು ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜಾ ಅವರು ತುಳುನಾಡ ಸೂರ್ಯ-ಚಂದ್ರ ಚಿಹ್ನೆಯ ಧ್ವಜವನ್ನು ನೀಡಿ ಅಭಿನಂದಿಸಿ, ಅಧಿಕಾರವನ್ನು ಅಧಿಕೃತವಾಗಿ ಹಸ್ತಾಂತರಿಸಿದರು.
ಬರುವ ಆಗಸ್ಟ್ 2ರಂದು ಭೈರಂಪಳ್ಳಿ ಘಟಕದ ವತಿಯಿಂದ ಬೃಹತ್ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಯಿತು. ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಕುರಿತು ಸಭೆಯಲ್ಲಿ ಸವಿಸ್ತಾರವಾಗಿ ಚರ್ಚಿಸಲಾಯಿತು. ಜೊತೆಗೆ ಭೈರಂಪಳ್ಳಿಯಲ್ಲಿ ಮಹಿಳಾ ಘಟಕವನ್ನು ಆರಂಭಿಸುವ ಕುರಿತು ಸಹ ನಿರ್ಣಯ ಕೈಗೊಳ್ಳಲಾಯಿತು.
ಸಭೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜಾ ಕೊಳಲಗಿರಿ ಅವರು, ಆಗಸ್ಟ್ ತಿಂಗಳಲ್ಲಿ ಜಿಲ್ಲಾ ಮಟ್ಟದಲ್ಲಿ ನಡೆಯಲಿರುವ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಈಗಿನಿಂದಲೇ ಪೂರ್ವಸಿದ್ಧತೆ ಕೈಗೊಳ್ಳುವಂತೆ ಕರೆ ನೀಡಿದರು. ಸಂಘಟನೆಯ ಶಕ್ತಿ, ಮಹತ್ವ ಹಾಗೂ ಸಮಾಜಮುಖಿ ಹೋರಾಟಗಳ ಮೂಲಕ ತುಳುನಾಡಿನ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಕಾಪು ತಾಲೂಕು ಉಪಾಧ್ಯಕ್ಷ ಶೋಧನ್ ಶೆಟ್ಟಿ ಶಿರೂರು, ತಾಲೂಕು ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಕುಲಾಲ್, ಭೈರಂಪಳ್ಳಿ ಘಟಕದ ಅಧ್ಯಕ್ಷ ಕೃಷ್ಣಾನಂದ ನಾಯಕ್, ಉಪಾಧ್ಯಕ್ಷರಾದ ಗುಣಾಕರ ಹಾಲಕ್ಕಿ ಹಾಗೂ ಸಂದೀಪ್ ಕುಲಾಲ್ ದೂಪದಕಟ್ಟೆ, ಜೊತೆ ಕಾರ್ಯದರ್ಶಿ ಪ್ರಸಾದ್ ಶೆಟ್ಟಿ ಮಜಲುಮನೆ, ಶರಣ್ ಪೂಜಾರಿ, ಸುಕೇಶ್ ಹಾಲಕ್ಕಿ ಸೇರಿದಂತೆ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

