ಬ್ರಹ್ಮಾವರ, ಜುಲೈ 12: ತುಳುನಾಡ ರಕ್ಷಣಾ ವೇದಿಕೆ (ರಿ.) ಬ್ರಹ್ಮಾವರ ತಾಲೂಕು ಘಟಕದ ಪದಾಧಿಕಾರಿಗಳ ಸಭೆಯು ಭಾನುವಾರ ಮಧ್ಯಾಹ್ನ ನಡೆಯಿತು. ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜಾ ಕೊಳಲಗಿರಿ ಅವರ ಸೂಚನೆಯಂತೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಹಾವಂಜೆ ಅವರ ನೇತೃತ್ವದಲ್ಲಿ ಸಭೆ ಜರುಗಿತು.
ಸಭೆಯಲ್ಲಿ ಸಂಘಟನೆಯ ಸಂಘಟನಾ ಶಕ್ತಿ ಹಾಗೂ ಸದಸ್ಯತ್ವವನ್ನು ಮತ್ತಷ್ಟು ಬಲಪಡಿಸುವ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು. ಸಂಘದ ಎಲ್ಲಾ ವಲಯದ ಪದಾಧಿಕಾರಿಗಳು ಹಾಗೂ ಸದಸ್ಯರು ಕಡ್ಡಾಯವಾಗಿ ಗುರುತಿನ ಚೀಟಿ (ಐಡಿ ಕಾರ್ಡ್) ಮತ್ತು ಸಂಘದ ಶಾಲು ಪಡೆದುಕೊಳ್ಳುವಂತೆ ಸೂಚಿಸಲಾಯಿತು.
ಇದೇ ವೇಳೆ ಆಗಸ್ಟ್ 16ರಂದು ಬ್ರಹ್ಮಾವರ ತಾಲೂಕು ಘಟಕದ ವತಿಯಿಂದ ನಡೆಯಲಿರುವ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲು ಅಗತ್ಯ ಪೂರ್ವಸಿದ್ಧತೆಗಳ ಕುರಿತು ಚರ್ಚೆ ನಡೆಸಲಾಯಿತು. ಜೊತೆಗೆ ಆರೂರು ಗ್ರಾಮದಲ್ಲಿ ತಲೆದೋರಿರುವ ಕುಡಿಯುವ ನೀರಿನ ಸರಬರಾಜು ಸಮಸ್ಯೆಗೆ ಸಂಬಂಧಿಸಿದಂತೆ ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಕೈಗೊಳ್ಳಬಹುದಾದ ಹೋರಾಟ ಹಾಗೂ ಮುಂದಿನ ಕ್ರಮಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಯಿತು.
ಸಭೆಯಲ್ಲಿ ಬ್ರಹ್ಮಾವರ ತಾಲೂಕು ಘಟಕದ ಅಧ್ಯಕ್ಷ ಶರತ್ ರಾಜ್ ಆರೂರು, ಪ್ರಧಾನ ಕಾರ್ಯದರ್ಶಿ ಮಹೇಂದ್ರ ಆಚಾರ್ಯ ಹೆರಂಜೆ, ಉಪಾಧ್ಯಕ್ಷ ನಿತಿನ್ ಶೆಟ್ಟಿ ಪೇತ್ರಿ, ಸಂಘಟನಾ ಕಾರ್ಯದರ್ಶಿ ವಿಜಯ ನಾಯ್ಕ್ ಹಾಗೂ ಸದಸ್ಯರಾದ ವಿಜಯ್ ಆರೂರು, ರಾಕೇಶ್, ರವಿ ಆರೂರು, ರಮೇಶ್ ಮತ್ತು ಕಿರಣ್ ಉಪಸ್ಥಿತರಿದ್ದರು.

