ಉಡುಪಿ (ಕಾಪು): ಕಾಂಗ್ರೆಸ್ ಮುಖಂಡ, ಉಡುಪಿ ಹಾಗೂ ಮುದರಂಗಡಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜಾ (ಪ್ರಿನ್ಸ್) ಅವರ ಮೇಲೆ ದುಷ್ಕರ್ಮಿಗಳು ದಿಢೀರ್ ಗುಂಡಿನ ದಾಳಿ ನಡೆಸಿ ಭೀಕರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ.
ಸ್ಥಳೀಯವಾಗಿ ಅತ್ಯಂತ ಪ್ರಭಾವಿ ಹಾಗೂ ಜನಪ್ರಿಯ ನಾಯಕರಾಗಿದ್ದ ಡೇವಿಡ್ ಡಿಸೋಜಾ ಅವರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಈ ಹಠಾತ್ ಶೂಟೌಟ್ ಘಟನೆಯಿಂದಾಗಿ ಕಾಪು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೀವ್ರ ಆತಂಕ ಹಾಗೂ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಗುಂಡಿನ ದಾಳಿಗೆ ನಿಖರವಾದ ಕಾರಣ ಏನೆಂಬುದು ತನಿಖೆಗೆ ತಿಳಿದುಬಂದಿಲ್ಲ. ಹತ್ಯೆಯ ಹಿಂದೆ ವೈಯಕ್ತಿಕ ದ್ವೇಷ, ಹಣಕಾಸು ವ್ಯವಹಾರ ಅಥವಾ ಇತರ ರಾಜಕೀಯ ಕಾರಣಗಳಿವೆಯೇ ಎಂಬ ಸತ್ಯಾಸತ್ಯತೆಯನ್ನು ಪೊಲೀಸರು ಜಾಲ ಬೀಸಿದ್ದಾರೆ.





