ಉಡುಪಿ, ಆ. 8: ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಆಗಸ್ಟ್ 16ರಂದು ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಆಯೋಜಿಸಲಾಗಿರುವ ‘ಆಟಿಡೊಂಜಿ ದಿನ’ ಕಾರ್ಯಕ್ರಮಕ್ಕೆ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಶ್ರೀ ಯು.ಟಿ. ಖಾದರ್ ಅವರನ್ನು ಭೇಟಿಯಾಗಿ ಅಧಿಕೃತವಾಗಿ ಆಮಂತ್ರಿಸಲಾಯಿತು.

ತುಳುನಾಡಿನ ವಿಶಿಷ್ಟ ಸಂಸ್ಕೃತಿ, ಸಂಪ್ರದಾಯ, ಆಚರಣೆ ಹಾಗೂ ಜನಪದ ಪರಂಪರೆಯನ್ನು ಪರಿಚಯಿಸುವ ಮತ್ತು ಉಳಿಸಿ ಬೆಳೆಸುವ ಉದ್ದೇಶದಿಂದ ಆಯೋಜಿಸಲಾಗಿರುವ ‘ಆಟಿಡೊಂಜಿ ದಿನ’ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಸಚಿವರಿಗೆ ನೀಡಿ, ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಹ್ವಾನಿಸಲಾಯಿತು.
ಈ ಸಂದರ್ಭದಲ್ಲಿ ತುಳುನಾಡ ರಕ್ಷಣಾ ವೇದಿಕೆ ಬೈರಂಪಳ್ಳಿ ಘಟಕದ ಅಧ್ಯಕ್ಷರಾದ ಕೃಷ್ಣಾನಂದ ನಾಯಕ್, ಉಡುಪಿ ಜಿಲ್ಲಾ ಸಂಘಟನಾ ಜೊತೆ ಕಾರ್ಯದರ್ಶಿ ಕೃಷ್ಣ ಮಾರ್ಪಳ್ಳಿ ಹಾಗೂ ಅಜಯ್ ಕುಲಾಲ್ ಉಪಸ್ಥಿತರಿದ್ದರು.
ತುಳುನಾಡಿನ ಸಾಂಸ್ಕೃತಿಕ ವೈಭವವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ‘ಆಟಿಡೊಂಜಿ ದಿನ’ದಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಸಂಘಟನೆಯ ಪ್ರಮುಖರು ತಿಳಿಸಿದ್ದಾರೆ.

