ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ (ಡಿಸಿಸಿ) ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ.
ಕಾಂಗ್ರೆಸ್ನ ‘ಸಂಘಟನ್ ಸೃಜನ್ ಅಭಿಯಾನ’ದ ಭಾಗವಾಗಿ ಈ ನೇಮಕ ನಡೆದಿದೆ. ಅಭಿಯಾನದಡಿ ದಕ್ಷಿಣ ಕನ್ನಡ ಜಿಲ್ಲೆಗೆ ನಿಯೋಜಿಸಲಾಗಿದ್ದ ಎಐಸಿಸಿ ವೀಕ್ಷಕರು ಪಕ್ಷದ ಪದಾಧಿಕಾರಿಗಳು ಹಾಗೂ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿ, ಜಿಲ್ಲೆಯ ಪಕ್ಷದ ಸಂಘಟನೆ ಕುರಿತು ಸಮಗ್ರ ವರದಿಯನ್ನು ಸಲ್ಲಿಸಿದ್ದರು.
ಈ ವರದಿ ಹಾಗೂ ಎಐಸಿಸಿ ವೀಕ್ಷಕರು ಮತ್ತು ಹಿರಿಯ ನಾಯಕರೊಂದಿಗೆ ನಡೆದ ಚರ್ಚೆಯ ಆಧಾರದ ಮೇಲೆ ಪದ್ಮರಾಜ್ ಆರ್.ಪೂಜಾರಿ ಅವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಲು ಅನುಮೋದನೆ ನೀಡಲಾಗಿದೆ

