ಮಂಗಳೂರು: 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.) ಹಾಗೂ ಯೋಗೀಶ್ ಶೆಟ್ಟಿ ಜಪ್ಪು ಅವರ ‘ತುಳುನಾಡ ಸೂರ್ಯ’ ಪತ್ರಿಕೆಯ ಜಂಟಿ ಆಶ್ರಯದಲ್ಲಿ ನವೆಂಬರ್ 17ರಂದು ಮಂಗಳೂರಿನ ಉರ್ವ ಸ್ಟೋರ್ನ ತುಳು ಭವನದಲ್ಲಿ ‘ತೌಳವ ಸಹಕಾರಿ ಪ್ರಶಸ್ತಿ ಪ್ರದಾನ ಸಮಾರಂಭ’ವನ್ನು ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಕಾರ್ಯಕ್ರಮದ ವಿವರ:
ಮಧ್ಯಾಹ್ನ 2 ಗಂಟೆಗೆ ಭಾಷಣ ಸ್ಪರ್ಧೆ ಹಾಗೂ ವಿವಿಧ ಚಟುವಟಿಕೆಗಳೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಮಧ್ಯಾಹ್ನ 3 ಗಂಟೆಗೆ ಮಂಗಳೂರಿನ ಅರೆಹೊಳೆ ಪ್ರತಿಷ್ಠಾನದ ವತಿಯಿಂದ ‘ನೃತ್ಯ ವೈಭವ’ ಪ್ರದರ್ಶನಗೊಳ್ಳಲಿದೆ. ಸಂಜೆ 4 ಗಂಟೆಗೆ ಸಭಾ ಕಾರ್ಯಕ್ರಮ ಜರುಗಲಿದೆ. ಅಧ್ಯಕ್ಷತೆ: ಡಿ.ಕೆ. ಬಿಸಿನೆಸ್ ಆ್ಯಂಡ್ ಟೆಕ್ನಾಲಜಿ ಅಡ್ವೈಸರ್ ಪ್ರೈವೇಟ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ಅಲ್ವಿನ್ ಜೋಯೆಲ್ ನೊರೊನ್ಹಾ.
ಆಶೀರ್ವಚನ: ಮೂಡಬಿದಿರೆ ಜೈನ ಮಠದ ಶ್ರೀ ಶ್ರೀ ಶ್ರೀ ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಮಾಡೂರು ಶಿವದುರ್ಗಾಂಬ ಮಠದ ಶ್ರೀ ಶ್ರೀ ಶಿವಯೋಗಿ ದುರ್ಗಾನಂದ ಸ್ವಾಮೀಜಿ.
ಉದ್ಘಾಟನೆ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ.
ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ:
ಸಹಕಾರಿ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರಿಗೆ ವಿವಿಧ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು:
ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ: ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ. ಪಿ.ಎಲ್. ಧರ್ಮ ಪ್ರದಾನ ಮಾಡಲಿದ್ದಾರೆ.
ತೌಳವ ಸಹಕಾರಿ ರತ್ನ ಪ್ರಶಸ್ತಿ: ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಪ್ರದಾನ ಮಾಡಲಿದ್ದಾರೆ.
ತೌಳವ ಸಹಕಾರಿ ಸಿರಿ ಪ್ರಶಸ್ತಿ: ಕರ್ನಾಟಕ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಪ್ರದಾನ ಮಾಡಲಿದ್ದಾರೆ.
ತೌಳವ ಸಹಕಾರಿ ಸಾಧಕ ಪ್ರಶಸ್ತಿ: ಕರ್ನಾಟಕ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಪ್ರದಾನ ಮಾಡಲಿದ್ದಾರೆ.
ಇದೇ ಸಂದರ್ಭದಲ್ಲಿ ಸಹಕಾರಿ ಕ್ಷೇತ್ರದಲ್ಲಿ ಸಾಧನೆಗೈದ ಅಲ್ವಿನ್ ಜೋಯೆಲ್ ನೊರೊನ್ಹಾ ಹಾಗೂ ಹೇಮಾವತಿ ಅವರಿಗೆ ವಿಶೇಷ ಗೌರವ ಸನ್ಮಾನ ನೆರವೇರಲಿದೆ. ಅಲ್ಲದೆ, ವಿವಿಧ ಕ್ಷೇತ್ರಗಳ ಸಾಧಕರನ್ನೂ ಸನ್ಮಾನಿಸಲಾಗುವುದು.
ಮುಖ್ಯ ಅತಿಥಿಗಳು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಶಾಸಕರಾದ ಮೊಯ್ದಿನ್ ಬಾವಾ ಮತ್ತು ಡಾ. ಬಿ.ಎಂ. ಫಾರೂಕ್, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ.
ಬಹುಮಾನ ವಿತರಣೆ:
ಅದಾನಿ ಗ್ರೂಪ್ನ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ ಅವರು ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಿದ್ದಾರೆ. ಭಾಷಣ ಸ್ಪರ್ಧೆಯ ಬಹುಮಾನಗಳನ್ನು ದುಬೈನ ಡಾ. ಡೇವಿಡ್ ಫ್ರಾಂಕ್ ಫೆರ್ನಾಂಡಿಸ್, ಸಹಕಾರ ಸಂಘಗಳ ಜಂಟಿ ನಿಬಂಧಕ ಪಿ. ಶಶಿಧರ್, ಉಪ ನಿಬಂಧಕ ಎಚ್.ಎನ್. ರಮೇಶ್, ಲಾವಣ್ಯ ಕೆ.ಆರ್., ತ್ರಿವೇಣಿ ರಾವ್ ಕೆ., ರಘು ಎಸ್.ಎಂ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ., ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹಾಗೂ ವಕೀಲ ಚಂದ್ರಹಾಸ್ ಕದ್ರಿ , ಉಡುಪಿ ಜಿಲ್ಲಾ ತುಳುನಾಡ ರಕ್ಷಣಾ ವೇದಿಕೆ ಅದ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು
ವಿಶೇಷ ಆಹ್ವಾನಿತರು:
2025ನೇ ಸಾಲಿನ ಪ್ರಶಸ್ತಿ ಪುರಸ್ಕೃತರಾದ ಮಾಜಿ ಸಚಿವ ಕೃಷ್ಣ ಪಾಲೆಮಾರ್, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್, ಭಗವತಿ ಸಹಕಾರ ಬ್ಯಾಂಕ್ನ ಉಪಾಧ್ಯಕ್ಷ ದೇವದಾಸ್ ಕೊಲ್ಯ, ನಾಗುರಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನ ಅಧ್ಯಕ್ಷ ಆನಂದ್ ಶೆಟ್ಟಿ ಅಡ್ಯಾರ್, ಉಡುಪಿ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ರಾಜೇಶ್ ಹೆಗ್ಡೆ, ಎಂ.ಸಿ.ಸಿ. ಬ್ಯಾಂಕ್ನ ಅಧ್ಯಕ್ಷ ಅನಿಲ್ ಲೋಬೋ, ಪೆರ್ಡೂರು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಅಧ್ಯಕ್ಷ ಸಂತೋಷ್ ಕುಲಾಲ್, ಕೋಟೆಕಾರು ವ್ಯವಸಾಯ ಸಹಕಾರ ಸಂಘದ ಅಧ್ಯಕ್ಷ ಕೃಷ್ಣ ಶೆಟ್ಟಿ ಕೆಳಗಿನ, ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ಶೆಟ್ಟಿ ಹಾಗೂ ಹಿರಿಯಡ್ಕ ರೈತರ ಸಹಕಾರ ಸಂಘ (ಅ.) ಅಧ್ಯಕ್ಷ ಬಿ. ಅಶೋಕ್ ಕುಮಾರ್ ಶೆಟ್ಟಿ ಬೆಳ್ಳಂಪಳ್ಳಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.
ಗೌರವ ಉಪಸ್ಥಿತಿ:
ತುಳುನಾಡ ರಕ್ಷಣಾ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ (ವೈದ್ಯರ ಘಟಕ) ಡಾ. ರವೀಂದ್ರ, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಪೂಜಾರಿ, ಉಡುಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ನಾಗಲಕ್ಷ್ಮಿ ಸುಬ್ರಹ್ಮಣ್ಯ ನಗರ, ಉಡುಪಿ ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಜಯ ಪೂಜಾರಿ ಲಕ್ಷ್ಮಿನಗರ, ಕಾಪು ತಾಲೂಕು ಅಧ್ಯಕ್ಷ ನಿತಿನ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ವೈದ್ಯರ ಘಟಕದ ಅಧ್ಯಕ್ಷ ಡಾ. ಸಂದೀಪ್ ಸನಿಲ್, ಬ್ರಹ್ಮಾವರ ತಾಲೂಕು ಅಧ್ಯಕ್ಷ ಶರತ್ ಅರೂರ್, ಕಾಪು ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಅನುಸೂಯ ಶೆಟ್ಟಿ ಹಾಗೂ ಆಲ್ ಇಂಡಿಯಾ ತುಳುವೆರ್ ಕಲ್ಚರಲ್ ಕ್ಲಬ್ (ರಿ.)ನ ಅನಿಲ್ ಕುಮಾರ್ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
ಸಹಕಾರಿ ಬಂಧುಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂಘಟಕರು ಕೋರಿದ್ದಾರೆ.




