ಉಡುಪಿ: ಭಾರತ ಸರ್ಕಾರದ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರು, ಮಾಜಿ ಮುಖ್ಯಮಂತ್ರಿ ಹಾಗೂ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಎಚ್.ಡಿ. ಕುಮಾರಸ್ವಾಮಿ ಅವರು ನವೆಂಬರ್ 15 ಮತ್ತು 16ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ನವೆಂಬರ್ 15ರಂದು ಭಾನುವಾರ ಸಂಜೆ 7.30ಕ್ಕೆ ಕೊಲ್ಲೂರಿಗೆ ಆಗಮಿಸಲಿರುವ ಅವರು, ಶ್ರೀ ಮೂಕಾಂಬಿಕಾ ದೇವಸ್ಥಾನದ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಲಿದ್ದು, ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ನವೆಂಬರ್ 16ರಂದು ಸೋಮವಾರ ಬೆಳಗ್ಗೆ 11.30ಕ್ಕೆ ಕಾಪುವಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಹಾಗೂ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಕಾಪುವಿನಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಯಾಣ ಬೆಳೆಸಲಿದ್ದಾರೆ.
ಈ ಸಂದರ್ಭದಲ್ಲಿ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯ, ಜಿಲ್ಲಾ ಹಾಗೂ ವಿಧಾನಸಭಾ ಕ್ಷೇತ್ರಗಳ ಅಧ್ಯಕ್ಷರು, ಎಲ್ಲಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ನಿಗದಿತ ಸಮಯಕ್ಕೆ ಆಗಮಿಸಿ ಸಚಿವರನ್ನು ಸ್ವಾಗತಿಸುವಂತೆ ಉಡುಪಿ ಜಿಲ್ಲಾ ಜನತಾದಳ (ಜಾತ್ಯತೀತ) ಅಧ್ಯಕ್ಷರಾದ ಯೋಗೀಶ್ ವಿ. ಶೆಟ್ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

