ಉಡುಪಿ: ಜಿಲ್ಲೆಯ ಮಟಪಾಡಿ ಗ್ರಾಮದಲ್ಲಿ ಊರಿನ ಜನರು ಅರಣ್ಯ ಇಲಾಖೆ ಮೂಲಕ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.
ಮಟಪಾಡಿ ಗ್ರಾಮದಲ್ಲಿ ಬಹಳಷ್ಟು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದರಿಂದ ಗ್ರಾಮಸ್ಥರು ಅರಣ್ಯ ಇಲಾಖೆ ಮೂಲಕ ಬೋನನ್ನು ಇರಿಸಿದ್ದರು. ಈ ಬೋನಿಗೆ ಮಂಗಳವಾರ ರಾತ್ರಿ ಚಿರತೆ ಬಿದ್ದಿದೆ. ಸುಮಾರು ಐದರಿಂದ ಆರು ವರ್ಷದ ಹೆಣ್ಣು ಚಿರತೆ ಇದಾಗಿದ್ದು ಅರಣ್ಯ ಇಲಾಖೆಯವರು ಈ ಚಿರತೆಯನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.
